
ಶಿವಮೊಗ್ಗ : ಗಣೇಶ ಹಬ್ಬದ ವೇಳೆ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ
ಶಿವಮೊಗ್ಗ, ಸೆ. 1: ಮುಂಬರುವ ಗಣೇಶ ಹಬ್ಬದ ಭದ್ರತೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲಾರಂಭಿಸಿದೆ. ಇದೀಗ ಗಣೇಶೋತ್ಸವದ ಭದ್ರತಾ ಕಾರ್ಯಕ್ಕೆ ನಾಗರೀಕರು ಹಾಗೂ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳಲು ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಸಾರ್ವಜನಿಕರು – ಸಂಘಸಂಸ್ಥೆಗಳಿಗೆ ಅವಕಾಶ ಕಲ್ಪಿಸಿದೆ.
ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ನಾಗರೀಕರು, ಸಂಘಸಂಸ್ಥೆಗಳ ಸದಸ್ಯರು ಸೆಪ್ಟೆಂಬರ್ 5 ರೊಳಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತೆರಳಿ ತಮ್ಮ ಹೆಸರು, ವಾಸ ಸ್ಥಳದ ವಿಳಾಸಕ್ಕೆ ಸಂಬಂಧಿಸಿದ ಮಾಹಿತಿ ನೀಡಿ ನೊಂದಾಯಿಸಿಕೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.