ಶಿವಮೊಗ್ಗ ವಿಮಾನ ನಿಲ್ದಾಣ : ಕನ್ನಡ ಮಾಹಿತಿ ಫಲಕದ ಫೋಟೋ ಶೇರ್ ಮಾಡಿದ ಸಚಿವರು! *’ಕನ್ನಡ ನೆಲ – ಜಲ – ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ’ : ಎಂ. ಬಿ. ಪಾಟೀಲ್

ಶಿವಮೊಗ್ಗ ವಿಮಾನ ನಿಲ್ದಾಣ : ಕನ್ನಡ ಮಾಹಿತಿ ಫಲಕದ ಫೋಟೋ ಶೇರ್ ಮಾಡಿದ ಸಚಿವರು!

*’ಕನ್ನಡ ನೆಲ – ಜಲ – ಭಾಷೆಯ ವಿಷಯದಲ್ಲಿ  ನಮ್ಮದು ಒಗ್ಗಟ್ಟಿನ ಧ್ವನಿ’ : ಎಂ. ಬಿ. ಪಾಟೀಲ್

ಶಿವಮೊಗ್ಗ, ಸೆ. 3: ಶಿವಮೊಗ್ಗ ವಿಮಾನ ನಿಲ್ದಾಣದ ಡಿಜಿಟಲ್ ಮಾಹಿತಿ ಫಲಕದಲ್ಲಿ, ಕನ್ನಡ ಭಾಷೆಯಲ್ಲಿ ವಿವರ ಬಿತ್ತರವಾಗುತ್ತಿರುವ ಫೋಟೋವನ್ನು ಮೂಲಸೌಕರ್ಯ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಶನಿವಾರ ಶೇರ್ ಮಾಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ : ಕನ್ನಡ ಮಾಹಿತಿ ಫಲಕದ ಫೋಟೋ ಶೇರ್ ಮಾಡಿದ ಸಚಿವರು! 
*’ಕನ್ನಡ ನೆಲ – ಜಲ – ಭಾಷೆಯ ವಿಷಯದಲ್ಲಿ  ನಮ್ಮದು ಒಗ್ಗಟ್ಟಿನ ಧ್ವನಿ’ : ಎಂ. ಬಿ. ಪಾಟೀಲ್

‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ… ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿನ ಮಾಹಿತಿ ಫಲಕ… ನೆಲ-ಜಲ-ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ…’ ಎಂಬ ಸಂದೇಶವನ್ನು ಪೋಟೊದ ಜೊತೆ ಸಚಿವರು ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದ ಡಿಜಿಟಲ್ ಮಾಹಿತಿ ಫಲಕದಲ್ಲಿ ಕನ್ನಡ ಭಾಷೆ ಕಡೆಗಣಿಸಲಾಗಿದೆ. ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಕೆಲ ನೆಟ್ಟಿಗರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಮಾಹಿತಿ ಫಲಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಚಿವ ಎಂ.ಬಿ.ಪಾಟೀಲ್ ಅವರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಈ ದೂರಿಗೆ ಪ್ರತಿಕ್ರಿಯಿಸಿದ್ದ ಸಚಿವರು, ‘ಇದು ನನ್ನ ಗಮನಕ್ಕೆ ಬಂದಿರಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಕುರಿತು ಮಾತನಾಡುವೆ’ ಎಂದು ಟ್ವೀಟ್ ಮಾಡಿದ್ದರು. ಈ ನಡುವೆ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆಯು ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಎದುರಿನಲ್ಲಿಯೇ ಪ್ರತಿಭಟನೆ ನಡೆಸಿತ್ತು. ಕನ್ನಡ ಭಾಷೆಗೆ ಆದ್ಯತೆ ನೀಡಬೇಕು. ಕನ್ನಡ ಭಾಷೆಯ ಮಾಹಿತಿ ಹಾಗೂ ಕುವೆಂಪು ಅವರ ನಾಮಫಲಕ ಅನಾವರಣ ಮಾಡಬೇಕು ಎಂದು ಆಗ್ರಹಿಸಿತ್ತು.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಸಚಿವರು, ಡಿಜಿಟಲ್ ಮಾಹಿತಿ ಫಲಕದಲ್ಲಿ ಕನ್ನಡ ಭಾಷೆಯ ವಿವರ ಪ್ರಕಟವಾಗುತ್ತಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಚಿವರ ಈ ಕ್ರಮಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರ ಸ್ಪಂದನೆಗೆ ಧನ್ಯವಾದ ಅರ್ಪಿಸಿದ್ದಾರೆ.

ಸಚಿವರ ಕ್ರಮ ಅಭಿನಂದನೀಯ’ : ಅಧ್ಯಕ್ಷ ವಾಟಾಳ್ ಮಂಜುನಾಥ್

*** ‘ಶಿವಮೊಗ್ಗ ವಿಮಾನ ನಿಲ್ದಾಣದ ಡಿಜಿಟಲ್ ಮಾಹಿತಿ ಫಲಕದಲ್ಲಿ ಕನ್ನಡ ಭಾಷೆಯಲ್ಲಿಯೂ ಮಾಹಿತಿ ಪ್ರಕಟಣೆಗೆ ಕ್ರಮಕೈಗೊಂಡಿರುವ ಮೂಲಸೌಕರ್ಯ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಧನ್ಯವಾದ ಅರ್ಪಿಸುವುದಾಗಿ’ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್ ಅವರು ಭಾನುವಾರ ತಿಳಿಸಿದ್ದಾರೆ.

ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್

ಕನ್ನಡ ಭಾಷೆಗೆ ಆದ್ಯತೆ ನೀಡಬೇಕು. ರಾಷ್ಟ್ರಕವಿ ಕುವೆಂಪು ಹೆಸರಿನ ನಾಮಫಲಕ ಹಾಕಬೇಕು ಎಂದು ಆಗ್ರಹಿಸಿ ಸಂಘಟನೆವತಿಯಿಂದ ವಿಮಾನ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ತಕ್ಷಣವೇ ರಾಷ್ಟ್ರಕವಿ ಕುವೆಂಪು ಹೆಸರಿನ ನಾಮಫಲಕ ಹಾಕಲು ಸಚಿವರು ಕ್ರಮಕೈಗೊಳ್ಳಬೇಕು ಎಂದು ಇದೇ ವೇಳೆ ವಾಟಾಳ್ ಮಂಜುನಾಥ್ ಅವರು ಮನವಿ ಮಾಡಿದ್ದಾರೆ.

ಭದ್ರಾವತಿ ಎಂಪಿಎಂ ಕಾರ್ಖಾನೆ ಪ್ರಾರಂಭ ಕುರಿತಂತೆ ಸೆ. 6 ರಂದು ಬೆಂಗಳೂರಿನಲ್ಲಿ ಸಭೆ Previous post ಭದ್ರಾವತಿ ಎಂಪಿಎಂ ಕಾರ್ಖಾನೆ ಪ್ರಾರಂಭ ಕುರಿತಂತೆ ಸೆ. 6 ರಂದು ಬೆಂಗಳೂರಿನಲ್ಲಿ ಸಭೆ
ಶಿವಮೊಗ್ಗ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 15, ಹಿರಿಯ ಪ್ರಾಥಮಿಕ ಶಾಲೆಯ 14, ಪ್ರೌಢಶಾಲೆಯ 9 ಶಿಕ್ಷಕರಿಗೆ ಪ್ರಶಸ್ತಿ Next post ಶಿವಮೊಗ್ಗ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ