
ಕಾಂಗ್ರೆಸ್ ಕಾರ್ಮಿಕ ವಿಭಾಗದ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಮಧುಕುಮಾರ್ ನೇಮಕ
ಶಿವಮೊಗ್ಗ, ಫೆ. 4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಮಧುಕುಮಾರ್ ಅವರನ್ನು ನೇಮಿಸಿ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಕೆ.ಪುಟ್ಟಸ್ವಾಮಿಗೌಡ ಆದೇಶ ಹೊರಡಿಸಿದ್ದಾರೆ.
ಶನಿವಾರ ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ಅವರು ಮಧುಕುಮಾರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಿನಯ್ ತಾಂದ್ಲೆ, ಬಾಲಾಜಿ, ಶರತ್ ಮರಿಯಪ್ಪ, ದರ್ಶನ್, ಹೆಚ್.ಎಂ.ಯೋಗೇಶ್, ಕವಿತಾ, ಅನಿಲ್ ಅಚಾರಿ ಸೇರಿದಂತೆ ಮೊದಲಾದವರಿದ್ದರು.