
ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ
ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.
ಶ್ರೀಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕೆಲ ಪೋಷಕರು ತಮ್ಮ ಪುಟಾಣಿ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಡಿಸಿ ಸಂಭ್ರಮಿಸಿದರು.

ಹಲವು ಸಂಘಸಂಸ್ಥೆಗಳು ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ಆಯೋಜಿಸಿದ್ದವು. ಆಕರ್ಷಕ ವೇಷಭೂಷಣ ಧರಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದವು.
ಹಲವೆಡೆ ವಿವಿಧ ಸಾಂಪ್ರದಾಯಿಕ ಆಟೋಟ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು. ಶ್ರೀಕೃಷ್ಣ ಜನ್ಮಾಷ್ಠಮಿಗೆ ಗಣ್ಯರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಶುಭ ಹಾರೈಸಿದ್ದಾರೆ.
ಫಸ್ಟ್ ಸ್ಟೆಪ್ ಪ್ರೀ ಸ್ಕೂಲ್ ನಲ್ಲಿ ಆಚರಣೆ

ಶಿವಮೊಗ್ಗದ ಕುವೆಂಪು ನಗರದಲ್ಲಿರುವ ಫಸ್ಟ್ ಸ್ಟೆಪ್ ಪ್ರೀಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ ಕಳೆಗಟ್ಟಿತ್ತು. ಶಾಲೆಯ ಪುಟಾಣಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟು ಕಂಗೊಳಿಸಿದರು.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...