
ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ಪೊಲೀಸ್ ಪಥ ಸಂಚಲನ
ಶಿವಮೊಗ್ಗ / ಭದ್ರಾವತಿ, ಸೆ. 10: ಶಿವಮೊಗ್ಗ ಹಾಗೂ ಭದ್ರಾವತಿಯ ವಿವಿಧೆಡೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಭಾನುವಾರ ಪಥ ಸಂಚಲನ ನಡೆಸಿದರು.
ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡ ಬಡಾವಣೆಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಠಾಣೆಯ ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಹಾಗೂ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಸಲೀಕಟ್ಟೆ, ಸಿದ್ದಾಪುರ ಹಾಗೂ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವೇಲೂರು ಶೆಡ್ ಜನ್ನಾಪುರ ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿದರು. ಎರಡು ಠಾಣೆಗಳ ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಹಾಗೂ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
