ಮಹಿಳೆಯ ಮಾಂಗಲ್ಯ ಸರ ಅಪಹರಣ : ಸಾಗರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ!

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಮಹಿಳೆಯ ಮಾಂಗಲ್ಯ ಸರ ಅಪಹರಣ – ಸಾಗರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ!

ಸಾಗರ, ಸೆ. 15: ಬೈಕ್ ವೊಂದರಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು, ಮಹಿಳೆಯೋರ್ವರ ಮಾಂಗಲ್ಯ ಸರ ಅಪಹರಿಸಿ ಪರಾರಿಯಾದ ಘಟನೆ ಸಾಗರ ಪಟ್ಟಣದ ವಿನೋಬನಗರ ಬಡಾವಣೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ವಿಜಯಮ್ಮ ಎಂಬುವರೆ ಸರ ಕಳೆದುಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಮನೆ ಮುಂಭಾಗ ನಿಂತಿದ್ದ ವೇಳೆ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಸರ ಅಪಹರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.  

40 ಗ್ರಾಂ ತೂಕದ ಮಾಂಗಲ್ಯ ಸರದಲ್ಲಿ 8 ಗ್ರಾಂ ತೂಕದಷ್ಟು ಸರ ಮಾತ್ರ ಕಳ್ಳರ ಪಾಲಾಗಿದೆ. ಉಳಿದ ಸರ ಉಳಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಬೈಕ್ ನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಮೀಪದ ಕಟ್ಟಡವೊಂದರಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮಕೈಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಸಾಗರ ಪಟ್ಟಣ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು ಗಣೇಶಮೂರ್ತಿಗಳ ವಿಸರ್ಜನೆಗೆ ಸಂಚಾರಿ ಟ್ಯಾಂಕ್ ವ್ಯವಸ್ಥೆ Previous post ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು
ಭದ್ರಾವತಿ : ನಾಲ್ಕು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್! Next post ಭದ್ರಾವತಿ : ನಾಲ್ಕು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್!