ಶಿವಮೊಗ್ಗ ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ಶಿವಮೊಗ್ಗ, ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ಶಿವಮೊಗ್ಗ / ರಿಪ್ಪನ್ ಪೇಟೆ, ಸೆ. 17: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಭಾನುವಾರ ಶಿವಮೊಗ್ಗ ನಗರದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಗುಡ್ಡ ಹಾಗೂ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಶಿವಮೊಗ್ಗ, ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಪಥ ಸಂಚಲನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಅಭಯ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ನಡೆಯಿತು. ಬಡಾವಣೆಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು.

ಶಿವಮೊಗ್ಗ, ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ರಿಪ್ಪನ್ ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಯಿತು. ಸಬ್ ಇನ್ಸ್’ಪೆಕ್ಟರ್ ಪ್ರವೀಣ್ ಕುಮಾರ್ ನೇತೃತ್ವವಹಿಸಿದ್ದರು. ಪಥ ಸಂಚಲನದಲ್ಲಿ  ಕೆ.ಎಸ್.ಆರ್.ಪಿ. ಹಾಗೂ ಹೋಂ ಗಾರ್ಡ್ ಸಿಬ್ಬಂದಿಗಳು ಕೂಡ ಭಾಗವಹಿಸಿದ್ದರು.

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ! Previous post ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!
ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ! Next post ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!