
ಸಾಗರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ
ಸಾಗರ, ಸೆ. 18: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಸೋಮವಾರ ಬೆಳಿಗ್ಗೆ ಸಾಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣ ನಾಯಕ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಯಿತು. ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಮಹಾಬಲೇಶ್ವರ ನಾಯ್ಕ್, ಟೌನ್ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಸೀತಾರಾಂ, ಎರಡೂ ಠಾಣೆಗಳ ಸಬ್ ಇನ್ಸ್’ಪೆಕ್ಟರ್ ಗಳು, ಸಿಬ್ಬಂದಿಗಳು

ಹಾಗೂ ಕೆ.ಎಸ್.ಆರ್.ಪಿ ಪಡೆಯ ಅಧಿಕಾರಿ, ಸಿಬ್ಬಂದಿಗಳು, ಹೋಂ ಗಾರ್ಡ್ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ಸಾಗಿತು.