ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾವತಿ, ಸೆ. 22: ಜಿಲ್ಲೆಯ ಹಲವು ಪ್ರವಾಸಿ ತಾಣಗಳು  ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ ಆದರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕದಂತೆ ಎಚ್ಚರವಹಿಸಬೇಕು’ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದರು.

ಭದ್ರಾವತಿ ತಾಲ್ಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಸ್ವಚ್ಛತಾ ಹಿ ಸೇವಾ ಆಂದೋಲನದ ಅಂಗವಾಗಿ ಭದ್ರಾ ಜಲಾಶಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಸಿಂಗನಮನೆ, ರಾಷ್ಟ್ರೀಯ ಪದವಿ ಪೂರ್ವ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನಡೆಯಿತು. 150ಕ್ಕೂ ಹೆಚ್ಚಿನ ಜನರು ಭಾಗವಹಿಸಿ ಎಲ್ಲೆಂದರಲ್ಲಿ ಬಿದ್ದಿದ್ದ ಕಸ ಸಂಗ್ರಹಿಸಿ ವಿಲೇವಾರಿ ಮಾಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳು, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜಿಲ್ಲಾ ಸಮಾಲೋಚಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿವಮೊಗ್ಗ : ಮೆಸ್ಕಾಂ ಪ್ರಕಟಣೆ ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಸೆ.24 ರಂದು ಗೋಪಿಶೆಟ್ಟಿಕೊಪ್ಪ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಸೆ.25 ರಂದು ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ Previous post ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ತಮಿಳುನಾಡಿಗೆ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ! Next post ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ!