
ಸೆ. 27 – 28 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
ಶಿವಮೊಗ್ಗ, ಸೆ. 26: ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲ್ಸೇತುವೆ ಬಳಿ ಸ್ಮಾರ್ಟ್ ಸಿಟಿಯಿಂದ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸೆ. 27 ಮತ್ತು 28 ರಂದು ಬಸವೇಶ್ವರ ನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್‍ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ,
ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ಹಾಗೂ ಈ ಬಡಾವಣೆಗಳಿಗೆ ಹೊಂದಿಕೊಂಡಂತಹ ಬಡಾವಣೆಗಳಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನೀರು ಸರಬರಾಜು ನಿಗಮ ನಿಯಮಿತದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನವೋದಯ 9 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, ಸೆ. 26: ಶಿವಮೊಗ್ಗ ತಾಲೂಕು ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsix ನಲ್ಲಿ ಸಲ್ಲಿಸಲು ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಎಂದು ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ನವೋದಯ 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, ಸೆ. 26: ಶಿವಮೊಗ್ಗ ತಾಲೂಕು ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 11 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsxi_11 ನಲ್ಲಿ ಸಲ್ಲಿಸಲು ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಎಂದು ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.