ಶಿವಮೊಗ್ಗದ ರಾಗಿಗುಡ್ಡದಲ್ಲಿ ಶಾಂತ ಸ್ಥಿತಿ – 43 ಜನರ ಬಂಧನ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಶಾಂತ ಸ್ಥಿತಿ – 43 ಜನರ ಬಂಧನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,  ಅ. 02 : ‘ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಅದನ್ನು ಹತ್ತಿಕ್ಕುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆಯಲ್ಲಿ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಅನಿವಾರ್ಯವಾಗಿ  ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಗಲಾಟೆಗೆ ಕಾರಣಕರ್ತರಾಗಿರುವ 43  ದುಷ್ಕರ್ಮಿಗಳನ್ನು ಬಂಧಿಸಿದ್ದು, ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿನ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಸೂಕ್ತ ಕೈಗೊಂಡಿದ್ದಾರೆ. ಶಾಂತಿ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ! Previous post ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!
ಹವಾಮಾನ ವೈಪರೀತ್ಯ : ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ಹಿಂದಿರುಗಿದ ವಿಮಾನ! Next post ಹವಾಮಾನ ವೈಪರೀತ್ಯ : ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ಹಿಂದಿರುಗಿದ ವಿಮಾನ!