ರಾಷ್ಟ್ರಮಟ್ಟದ ಇನ್‍ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿನಿಯರು

ಶಿವಮೊಗ್ಗ ಅ. 4: ಇನ್‍ಸ್ಪೈರ್ ಅವಾರ್ಡ್ 2020-21 ನೇ ಸಾಲಿನ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ, ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನ ಎಸ್ ಶೆಟ್ಟಿ, ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಪೇಕ್ಷ ಹೆಚ್.ಪಿ. ಹಾಗೂ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಂದ್ರಮ್ಮ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿನಿಯರಾಗಿದ್ದಾರೆ.

ನವದೆಹಲಿಯಲ್ಲಿ ಅ.9 ರಿಂದ ಅ.11 ರವರೆಗೆ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಈ ಮೂವರು ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ.

ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಹಾಗಿರುವ ಮೂವರು ವಿದ್ಯಾರ್ಥಿನಿಯರನ್ನು ಡಯಟ್ ಪ್ರಾಂಶುಪಾಲರಾದ ಬಿ.ಆರ್.ಬಸವರಾಜಪ್ಪ, ಇನ್‍ಸ್ಪೈರ್ ಅವಾರ್ಡ್ ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜ ಎಂ ಹಾಗೂ ಇತರೆ ಉಪನ್ಯಾಸಕರು, ನೌಕರ ವೃಂದದವರು ಅಭಿನಂದಿಸಿದ್ದಾರೆ.

Previous post ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ. 20 ರಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ
Next post ಅ. 7 – 8 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆ ವ್ಯತ್ಯಯ : ಸಹಕರಿಸಲು ಮನವಿ