ಅ. 7 – 8 ರಂದು ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆ ವ್ಯತ್ಯಯ : ಸಹಕರಿಸಲು ಮನವಿ

ಶಿವಮೊಗ್ಗ, ಅ. 6: ಶಿವಮೊಗ್ಗ ನಗರದಲ್ಲಿ ಅ. 7 ಮತ್ತು 8 ರಂದು ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ಆಡಳಿತ ಶುಕ್ರವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಮೆಸ್ಕಾಂ ಸಂಸ್ಥೆಯು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ, ನಗರದ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅ. 7 ಮತ್ತು 8 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸೂಕ್ತ ಸಹಕಾರ ನೀಡುವಂತೆ ಜಲ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡಿದ್ದಾರೆ.  

Previous post ರಾಷ್ಟ್ರಮಟ್ಟದ ಇನ್‍ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿನಿಯರು
ಗಾಂಜಾ ಮಾರಾಟ ಪ್ರಕರಣ : ಇಬ್ಬರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ – 10 ಸಾವಿರ ರೂ. ದಂಡ! Next post ಗಾಂಜಾ ಮಾರಾಟ ಪ್ರಕರಣ : ಇಬ್ಬರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ – 10 ಸಾವಿರ ರೂ. ದಂಡ!