ನ.08 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ
ಶಿವಮೊಗ್ಗ, ನ. 4: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನ.08 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ/ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.
ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ http://skillconnect.kaushalkar.com/candidatereg ರಲ್ಲಿ ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇರ್ಶ ಹೆಚ್.ಎಂ. ದೂ.ಸಂ.: 08182-255294/ 9019485688/9880005425 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭತ್ತಕ್ಕೆ ಬೆಂಬಲ ಬೆಲೆ ; ರೈತರ ನೊಂದಣಿ ಪ್ರಕ್ರಿಯೆ ಆರಂಭ
ಶಿವಮೊಗ್ಗ, ನ. 4: 2023-24ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿದಲು ರೈತರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.
ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಭತ್ತವನ್ನು ನೀಡಲು ಇಚ್ಛಿಸುವ ರೈತರು ಖರೀದಿ ಕೇಂದ್ರಗಳಲ್ಲಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ತಂತ್ರಾಂಶದ ಗುರುತಿನ ಪತ್ರ, ಆಧಾರ್ ಸಂಖ್ಯೆ ಮತ್ತು ತಮ್ಮ ಬ್ಯಾಂಕ್ ಖಾತೆಯ ಎಲ್ಲಾ ವಿವರಗಳು ಇರುವ ಪಾಸ್ ಪುಸ್ತಕದ ಇತ್ತೀಚಿನ ದೃಢೀಕೃತ ಪ್ರತಿಯೊಂದಿಗೆ ನ.15 ರಿಂದ ಹೆಸರನ್ನು ನೋಂದಣಿ ಮಾಡಿಕೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸೇರಿದಂತೆ ಎಲ್ಲಾ ತಾಲೂಕುಗಳ ಎ.ಪಿ.ಎಂ.ಸಿ ಯಾರ್ಡ್‍ಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ಡಿಸೆಂಬರ್ 01, 2023 ರಿಂದ ಮಾರ್ಚ್ 31, 2024ರವರೆಗೆ ರೈತರಿಂದ ಭತ್ತ ಖರೀದಿಸಲಾಗುವುದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಂಡ ಸಂದರ್ಭದಲ್ಲಿ ಅಗತ್ಯವಿದ್ದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು.
ಸಾಮಾನ್ಯ ಭತ್ತಕ್ಕೆ ರೂ. 2183/- ಹಾಗೂ ಗ್ರೇಡ್ ಎ ಭತ್ತಕ್ಕೆ ರೂ. 2203/- ರಂತೆ ಸರ್ಕಾರವು ಬೆಲೆ ನಿಗದಿಪಡಿಸಿದೆ. ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.