
ಕಾಡಾನೆಗಳ ದಾಳಿಗೆ ಕೃಷಿ ಬೆಳೆ ನಾಶ : ಅರಣ್ಯ ಇಲಾಖೆ ವಿರುದ್ದ ಗ್ರಾಮಸ್ಥರ ಆಕ್ರೋಶ!
ಶಿವಮೊಗ್ಗ, ನ. 22: ಕಾಡಾನೆಗಳ ನಿರಂತರ ದಾಳಿಯಿಂದ ಗದ್ದೆ – ತೋಟಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗುತ್ತಿದ್ದು, ಕಾಡಾನೆಗಳ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಾಲಿಗೆರೆ ಗ್ರಾಮಸ್ಥರು ದೂರಿದ್ದಾರೆ.
ಸಾಲಿಗೆರೆ ಗ್ರಾಮಕ್ಕೆ ಮಂಗಳವಾರ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಆಕ್ರೋಶಭರಿತ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಕಳೆದ ನಾಲ್ಕೈದು ವರ್ಷಗಳಿಂದ ಸಾಲಿಗೆರೆ ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಗದ್ದೆ, ತೋಟಗಳಲ್ಲಿ ಕಷ್ಟಪಟ್ಟು ಬೆಳೆದ ಬೆಳೆ ಹಾಳಾಗುತ್ತಿದೆ. ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳದ ಕಾರಣದಿಂದ ರೈತರು ತೊಂದರೆ ಪಡುವಂತಾಗಿದೆ ಎಂದು ಸ್ಥಳಿಯರು ದೂರಿದ್ದಾರೆ.
ತಕ್ಷಣವೇ ಕಾಡಾನೆಗಳು ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?