
ಇಬ್ಬರು ಮಕ್ಕಳೊಂದಿಗೆ ಕಣ್ಮರೆಯಾದ ತಾಯಿ : ಮಾಹಿತಿ ನೀಡಲು ಪೊಲೀಸರ ಮನವಿ
ಶಿವಮೊಗ್ಗ, ಡಿ. 01: ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ದ ನಗರ 1 ನೇ ಕ್ರಾಸ್ ನ ಮಹಿಳೆಯೋರ್ವರು ತನ್ನಿಬ್ಬರು ಮಕ್ಕಳೊಂದಿಗೆ ಕಣ್ಮರೆಯಾಗಿದ್ದು, ಇವರ ಪತ್ತೆಗೆ ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಮೊಹಮದ್ ಜಾಫರ್ ಎಂಬುವವರ ಪತ್ನಿ ಉಮ್ಮೆ ಹನಿ (29 ವರ್ಷ), ಮಗಳು ಆಸ್ಪಿಯಾ ಕೌನೈನ್ (9) ಹಾಗೂ ಮೊಹಮದ್ ಸೂಫಿಯಾನ್ (5) ನಾಪತ್ತೆಯಾದವರೆಂದು ಗುರುತಿಸಲಾಗಿದೆ. ನ. 20 ರಂದು ಮಹಿಳೆಯು ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೋದವರು ಈವರೆಗೂ ವಾಪಸ್ಸು ಬಂದಿರುವುದಿಲ್ಲ.
ಮಹಿಳೆಯು 5.3 ಅಡಿ ಎತ್ತರ, ದೃಢವಾದ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ ಹೊಂದಿದ್ದು, ನೀಲಿ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ.
ಆಸ್ಪಿಯಾ ಕೌನೈನ್ 4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ ಹೊಂದಿದ್ದು, ಕ್ರೀಂ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಸ್ಕರ್ಟ್ ಧರಿಸಿರುತ್ತಾಳೆ.
ಮೊಹಮದ್ ಸೂಫಿಯಾನ್ 3.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡನೆ ಮುಖ ಹೊಂದಿದ್ದು, ಕ್ರೀಂ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಚಡ್ಡಿ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿಗಳ ಮಾಹಿತಿ ದೊರೆತಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 08182-261414 / 9611761255 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.