Lok Sabha General Election – 2024: Training Workshop for Officers at Shimoga

ಲೋಕಸಭೆ ಸಾರ್ವತ್ರಿಕ ಚುನಾವಣೆ – 2024: ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಶಿವಮೊಗ್ಗ, ಡಿ. 4: ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದ್ದು, ಯಾವುದೇ ಲೋಪದೋಷವಿಲ್ಲದಂತೆ ಕಾರ್ಯ ನಿರ್ವಹಿಸಲು ಸನ್ನದ್ದರಾಗಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣಾ ವೇಳೆ ಸೆಕ್ಟರ್ ಅಧಿಕಾರಿಗಳ/ಸೆಕ್ಟರ್ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಗಳು, ಕರ್ತವ್ಯಗಳು ಹಾಗೂ ಒಟ್ಟಾರೆ ಕಾರ್ಯವಿಧಾನದ ಕುರಿತು ಇಂದಿನ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ತರಬೇತಿಯನ್ನು ನೀಡುವರು. ತರಬೇತಿ ಪಡೆದ ಸೆಕ್ಟರ್ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸೆಕ್ಟರ್ ಅಧಿಕಾರಿ/ಪೊಲೀಸ್ ಸೆಕ್ಟರ್ ಅಧಿಕಾರಿಗಳ ಕಾರ್ಯ ವಿಧಾನದ ಕುರಿತು ವಿವರಣೆ ನೀಡಿದರು.

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರನಾಯ್ಕ್ ಪಿಪಿಟಿ ಮೂಲಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿಗಳು, ಸ್ಥಾನಮಾನಗಳು, ಸಿದ್ದತೆಗಳು, ಕಾರ್ಯವಿಧಾನದ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪೊಲೀಸ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

A man who was traveling in a scooty was killed by pouring petrol on him and setting him on fire! ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ! Previous post ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ!
City-Town Local Bodies President-Vice-President Election to Nenegudi: MLA D.S. Arun is very upset - Appeal to Municipal Administration Minister ನಗರ–ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ – ಪೌರಾಡಳಿತ ಸಚಿವರಿಗೆ ಮನವಿ Next post ನಗರ – ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ!