
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುರಕ್ಷತಾ ಕ್ರಮಗಳ ಅನುಷ್ಠಾನಕ್ಕೆ ಕ್ರಮ : ಸಂಸದರಿಗೆ ಕೇಂದ್ರ ಸಚಿವರ ಭರವಸೆ
ದೆಹಲಿ / ಶಿವಮೊಗ್ಗ, ಡಿ. 14: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುರಕ್ಷತಾ ಕ್ರಮಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ, ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಪತ್ರ ಅರ್ಪಿಸಿದ್ದಾರೆ.
ವಿಮಾನ ನಿಲ್ದಾಣದಿಂದ ಈಗಾಗಲೇ ಬೆಂಗಳೂರು ಸೇರಿದಂತೆ ನಾಲ್ಕು ಪ್ರಮುಖ ನಗರಗಳಿಗೆ ವಿಮಾನಗಳ ಸಂಚಾರ ಆರಂಭಗೊಂಡಿದೆ. ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್ ಗೆ ಇನ್ನಷ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಚಳಿಗಾಲದ ವೇಳೆ ಮಂಜು ಮುಸುಕಿದ ವಾತಾವರಣದಲ್ಲಿ ವಿಮಾನಗಳ ಲ್ಯಾಂಡಿಂಗ್ ಗೆ ದೃಷ್ಟಿ ಗೋಚರತೆ (visibility) ಸಮಸ್ಯೆ ಎದುರಾಗಲಿದೆ.
ಇದರ ನಿವಾರಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಬ್ಯೂರೋ ಆಫ್ ಇಂಡಿಯಾ ಏವಿಯೇಷನ್ ಸೆಕ್ಯೂರಿಟಿಗೆ ಸೂಚಿಸುವಂತೆ ಸಚಿವರಿಗೆ ಸಂಸದರು ಮನವಿ ಮಾಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ವ್ಯವಸ್ಥಿತ ವಿಮಾನ ಸಂಚಾರ ಹಾಗೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ತ್ವರಿತಗತಿಯಲ್ಲಿ ಅಗತ್ಯ ಕ್ರಮಗಳ ಅನುಷ್ಠಾನ ಮಾಡಬೇಕು ಎಂದು ಸಂಸದರು ಮನವಿ ಮಾಡಿದ್ದು, ಈ ನಿಟ್ಟಿನಲ್ಲಿ ಕಾಲಮಿತಿಯೊಳಗೆ ಕ್ರಮಕೈಗೊಳ್ಳುವ ಭರವಸೆಯನ್ನು ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ನೀಡಿದ್ದಾರೆ.