
ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ
ಶಿವಮೊಗ್ಗ, ಡಿ. 20: ವಿವಿಧೆಡೆ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ನಾಲ್ವರನ್ನು ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ವಶಕ್ಕೆ ಪಡೆದ ಘಟನೆ ನಡೆದಿದೆ.
ಮೈಸೂರಿನ ಪಿರಿಯಾಪಟ್ಟಣ ನಿವಾಸಿ ಸಂತೋಷ ಯಾನೆ ಎಮ್ಮೆ ಸಂತೋಷ (36), ಶಿವಮೊಗ್ಗದ ಅಶೋಕ ನಗರದ ನಿವಾಸಿಗಳಾದ ಮಹಮ್ಮದ್ ನದೀಮ್ ಯಾನೆ ನದ್ದು (30), ಇಮ್ರಾನ್ (32) ಹಾಗೂ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುರೇಶ್ ಕೆ (43) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಧಿತರಿಂದ 12.65 ಲಕ್ಷ ರೂ. ಮೌಲ್ಯದ 230 ಗ್ರಾಂ ತೂಕದ ಬಂಗಾರ, 72 ಸಾವಿರ ರೂ. ಮೌಲ್ಯದ 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳು, 25,140 ನಗದು, ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳ ಬಂಧನದಿಂದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಸ್ವತ್ತು ಕಳವು ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್ ಬಿ, ಸಬ್ ಇನ್ಸ್’ಪೆಕ್ಟರ್ ಗಳಾದ ಶಿವಪ್ರಸಾದ್, ಮಂಜುನಾಥ್ ಪಿ, ರಘುವೀರ್, ಕುಮಾರ ಕೂರಗುಂದ, ದೂದ್ಯನಾಯ್ಕ್,
ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ‍್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್, ಚೇತನ್ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.