
ಗೃಹ ಲಕ್ಷ್ಮೀ ಯೋಜನೆ : ಡಿ. 27 ರಿಂದ ಡಿ. 29 ರವರೆಗೆ ಗ್ರಾಪಂ ಕಚೇರಿಗಳಲ್ಲಿ ವಿಶೇಷ ಕ್ಯಾಂಪ್ ಆಯೋಜನೆ
ಶಿವಮೊಗ್ಗ, ಡಿ. 26: ಮನೆಯೊಡತಿಗೆ ಮಾಸಿಕ 2000 ರೂ. ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆ ಪರಿಹರಿಸಲು, ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27 ರಿಂದ ಡಿ. 29 ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಶೇಷ ಕ್ಯಾಂಪ್‍ಗಳನ್ನು ಜಿಲ್ಲಾ ಪಂಚಾಯ್ತಿ ಆಡಳಿತ ಆಯೋಜಿಸಿದೆ.
ಈ ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‍ಡೆಟ್ ಮಾಡುವುದು, ಗೃಹ ಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.
ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...