Permission for Lokayukta inquiry: No delay - Chief Minister's strict instruction ಲೋಕಾಯುಕ್ತ ವಿಚಾರಣೆಗೆ ಅನುಮತಿ : ವಿಳಂಬ ಸಲ್ಲದು - ಸಿಎಂ ಸೂಚನೆ

ಲೋಕಾಯುಕ್ತ ವಿಚಾರಣೆಗೆ ಅನುಮತಿ : ವಿಳಂಬ ಸಲ್ಲದು- ಸಿಎಂ ಸೂಚನೆ

ಬೆಂಗಳೂರು, ಡಿ. 29 : ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತಂತೆ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದರು.

ಲೋಕಾಯುಕ್ತ ವಿಚಾರಣೆಗೆ ಅನುಮತಿ ವಿಳಂಬವಾಗಬಾರದು. ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಸಲ್ಲದು. ಇದರಿಂದ ಜನತೆಗೆ ತಪ್ಪು ಸಂದೇಶ ಹೋಗಬಾರದು. ಆದ್ದರಿಂದ ತ್ವರಿತ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶಗಳನ್ನು ಕಳುಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Shimoga - Bhadravati: Police raid on cannabis stalls! ಶಿವಮೊಗ್ಗ – ಭದ್ರಾವತಿಯಲ್ಲಿ ಗಾಂಜಾ ಅಡ್ಡೆಗಳ ಮೇಲೆ ಪೊಲೀಸರ ರೈಡ್! Previous post ಶಿವಮೊಗ್ಗ – ಭದ್ರಾವತಿಯಲ್ಲಿ ಗಾಂಜಾ ಅಡ್ಡೆಗಳ ಮೇಲೆ ಪೊಲೀಸರ ರೈಡ್!
Worms coming from FCI warehouse in Alkola, Shimoga : Citizens panic..! ಶಿವಮೊಗ್ಗದ ಆಲ್ಕೋಳದ ಎಫ್.ಸಿ.ಐ ಗೋದಾಮಿನಿಂದ ಬರುವ ಹುಳು, ಹುಪ್ಪಟ್ಟೆ : ನಾಗರೀಕರು ತತ್ತರ..! Next post ಶಿವಮೊಗ್ಗದ ಆಲ್ಕೋಳದ ಎಫ್.ಸಿ.ಐ ಗೋದಾಮಿನಿಂದ ಬರುವ ಹುಳು, ಹುಪ್ಪಟ್ಟೆ : ನಾಗರೀಕರು ತತ್ತರ..!