
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆ.ಈಶ್ವರ್ ಬೊಮ್ಮನಕಟ್ಟೆ ನೇಮಕ
ಶಿವಮೊಗ್ಗ, ಡಿ. 31: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಕೆ.ಈಶ್ವರ್ ಬೊಮ್ಮನಕಟ್ಟೆ ಅವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಆದೇಶ ಹೊರಡಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಕೆ.ಈಶ್ವರ್ ಅವರಿಗೆ ಜಿಲ್ಲಾಧ್ಯಕ್ಷರು ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ರಮೇಶ್, ಇಕ್ಕೇರಿ, ಪ್ರಧಾನ ಕಾರ್ಯದರ್ಶಿ ಎಸ್.ಚಿನ್ನಪ್ಪ, ಕಾರ್ಯದರ್ಶಿ ಎಸ್.ತಂಗರಾಜ್, ಬ್ಲಾಕ್ ಅಧ್ಯಕ್ಷರುಗಳಾದ ಶಿವಕುಮಾರ್, ಕಲೀಂ ಪಾಷಾ, ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿ ಆರ್.ಆರ್.ಮಂಜುನಾಥ್, ಕಾರ್ಯದರ್ಶಿ ಕುಮಾರಸ್ವಾಮಿ, ಮುಖಂಡರಾದ ಧೀರರಾಜ್ ಹೊನ್ನವಿಲೆ, ವೇದಮೂರ್ತಿ, ಮಧು ಸೇರಿದಂತೆ ಮೊದಲಾದವರಿದ್ದರು.
ಸಮರ್ಥ ನಿರ್ವಹಣೆ : ‘ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಅವರು ತಮ್ಮ ಮೇಲೆ ನಂಬಿಕೆಯಿಟ್ಟು ಮಹತ್ವದ ಜವಾಬ್ದಾರಿವಹಿಸಿದ್ದಾರೆ. ಮುಖಂಡರು ತಮ್ಮ ಮೇಲಿಟ್ಟಿರುವ ವಿಶ್ವಾಸ ಉಳಿಸಿಕೊಂಡು ಹೋಗುತ್ತೆನೆ. ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೆನೆ’ ಎಂದು ಕೆ.ಈಶ್ವರ್ ಬೊಮ್ಮನಕಟ್ಟೆ ಅವರು ತಿಳಿಸಿದ್ದಾರೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...