
ಮೆಸ್ಕಾಂ ಸಾರ್ವಜನಿಕ ಪ್ರಕಟಣೆ – ವಿದ್ಯುತ್ ವ್ಯತ್ಯಯ : ಜನ ಸಂಪರ್ಕ ಸಭೆ ; ವಿದ್ಯುತ್ ದರ ಪರಿಷ್ಕರಣೆ ಕುರಿತಂತೆ ವಿಚಾರಣಾ ಸಭೆ
ಫೆ.16 ಮತ್ತು 17 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ನಗರ ಉಪವಿಭಾಗದ -1 ರ ಫೀಡರ್ – 3, 11 ಕೆ.ವಿ ಮಾರ್ಗ ಮುಕ್ತತೆ ನೀಡುವುದರಿಂದ ಫೆ. 16 ಮತ್ತು 17 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯಾನಗರ 6 ನೇ ಮುಖ್ಯ ರಸ್ತೆ, ಸುಭಾಷ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ: ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-3ರ ಕಛೇರಿಯಲ್ಲಿ ದಿನಾಂಕ: 16.02.2023 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ದರ ಪರಿಷ್ಕರಣೆ ; ಸಾರ್ವಜನಿಕ ವಿಚಾರಣಾ ಸಭೆ
ಶಿವಮೊಗ್ಗ: ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಲುವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮ.ವಿ.ಸ.ಕಂಪೆನಿಯು ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಆಯೋಗವು ಸಾರ್ವಜನಿಕ ವಿಚಾರಣೆ ಸಭೆಯನ್ನು ಫೆ. 17 ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಯಿಂದ ಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಸಲಿರುವುದು. ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.