ಸಚಿವ ಅಶ್ವತ್ಥ್ ನಾರಾಯಣ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಮನವಿ

ಶಿವಮೊಗ್ಗ, ಫೆ. 16: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಹತ್ಯೆಗೆ ಪ್ರಚೋದನೆ ನೀಡಿರುವ ಸಚಿವ ಡಾ.ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್‌ಐ‌ಆರ್ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ, ಕಾಂಗ್ರೆಸ್ ಪಕ್ಷದ ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಹಿಂದುಳಿದ ವರ್ಗಗಳ ಕಾಂಗ್ರೆಸ್‌ ಸದಸ್ಯರು ಜಿಲ್ಲಾ ರಕ್ಷಣಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಗುರುವಾರ ಮನವಿ ಪತ್ರ ಅರ್ಪಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಾಡು ಕಂಡ ಅಪ್ರತಿಮ ನಾಯಕರಾಗಿದ್ದಾರೆ.  ಟಿಪ್ಪುವನ್ನು ಹೊಡೆದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಮಾನಸಿಕ ಅಸ್ವಸ್ಥರ ರೀತಿ ಸಚಿವ ಅಶ್ವತ್ಥ್ ನಾರಾಯಣ್ ಬಹಿರಂಗ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಇತ್ತೀಚೆಗೆ ಅಶ್ವತ್ಥ್ ನಾರಾಯಣ್ ಹತಾಶೆಯಿಂದ ಬಳಲುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಪ್ರಜ್ಞಾಹೀನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ರಾಜ್ಯದ ಜನತೆಗೆ ತಪ್ಪು ಸಂದೇಶ ಹೋಗುತ್ತದೆ. ಹಾಗಾಗಿ ಇವರ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿದಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ  ಹಿಂದುಳಿದ  ವರ್ಗದ ಜಿಲ್ಲಾಧ್ಯಕ್ಷರಾದ ರಮೇಶ್ ಇಕ್ಕೇರಿ, ನಗರ ಅಧ್ಯಕ್ಷರಾದ ಮೋಹನ್,  ಕೆಪಿಸಿಸಿ ಕಾರ್ಯದರ್ಶಿಯಾದ ದೇವೇಂದ್ರಪ್ಪ, ಯುವ ಕಾಂಗ್ರೆಸ್ ನಗರದ ಅಧ್ಯಕ್ಷರಾದ ವಿನಯ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ  ಮಧು ಕುಮಾರ್, ಯುವ ಮುಖಂಡರುಗಳಾದ ಶರತ್,  ವಿನಯ್ ಪ್ರದೀಪ್, ಅರುಣ, ಪ್ರಮೋದ್ರ, ರಾಜೇಶ್, ಗಿರೀಶ , ಸಂದೀಪ್, ಭರತ್,  ಧನಂಜಯ್,  ದರ್ಶನ್, ಸಚಿನ್ ಮೊದಲಾದವರಿದ್ದರು.

Previous post ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಗಳಾಗಿ ವರಣ್ ವಿ ಪಂಡಿತ್, ಉಲ್ಲಾಸ್ ಎಮ್ ಶೆಟ್ಟಿ ಆಯ್ಕೆ
Next post ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ ಕಾರ್ಯಕ್ರಮ