'If theft is increasing it means the patrolling system has failed': CM upset in meeting of police officers ‘ಕಳ್ಳತನ ಹೆಚ್ಚಾಗುತ್ತಿದ್ದರೆ ಗಸ್ತು ವ್ಯವಸ್ಥೆ ವಿಫಲವಾಗಿದೆ ಎಂದರ್ಥ’ : ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಅಸಮಾಧಾನ

‘ಕಳ್ಳತನ ಹೆಚ್ಚಾಗುತ್ತಿದ್ದರೆ ಗಸ್ತು ವ್ಯವಸ್ಥೆ ವಿಫಲವಾಗಿದೆ ಎಂದರ್ಥ’ : ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಅಸಮಾಧಾನ

ಬೆಂಗಳೂರು, ಜ. 16: ‘ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ, ಗಸ್ತು ವಾಹನ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆಂದು ಅರ್ಥವಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. 

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. 

ಮಹಿಳೆ ಮತ್ತು ಮಕ್ಕಳ ಮೇಲಿನ  ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು.  ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು. 

ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸೂಚಿಸಿದರು. 

ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದರು. 

ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ.  ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು. 

The will of the state government flows towards the important administrative demands of Shimoga..?! ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?! Previous post ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!
Government Employees' Association requests CM to announce wage revision before Lok Sabha Elections Code of Conduct is announced ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆ ಘೋಷಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ Next post ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ