Government Employees' Association requests CM to announce wage revision before Lok Sabha Elections Code of Conduct is announced ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆ ಘೋಷಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ

ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ

ಬೆಂಗಳೂರು, ಜ. 16: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ  ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.  

ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆ ಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ  ಮಾಡಿತು. 

ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ  ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ಕೋರಿದರು. 

ತೀವ್ರತರವಾದ 7 ಕಾಯಿಲೆಗಳಿಗೆ  ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ  ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಮನವಿ ಮಾಡಿದರು. ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

'If theft is increasing it means the patrolling system has failed': CM upset in meeting of police officers ‘ಕಳ್ಳತನ ಹೆಚ್ಚಾಗುತ್ತಿದ್ದರೆ ಗಸ್ತು ವ್ಯವಸ್ಥೆ ವಿಫಲವಾಗಿದೆ ಎಂದರ್ಥ’ : ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಅಸಮಾಧಾನ Previous post ‘ಕಳ್ಳತನ ಹೆಚ್ಚಾಗುತ್ತಿದ್ದರೆ ಗಸ್ತು ವ್ಯವಸ್ಥೆ ವಿಫಲವಾಗಿದೆ ಎಂದರ್ಥ’ : ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಅಸಮಾಧಾನ
Shimoga - Bhadravati Urban Development Authority fenced the public road! ಸಾರ್ವಜನಿಕ ರಸ್ತೆಗೆ ಕಬ್ಬಿಣದ ತಡೆ ಬೇಲಿ ಹಾಕಿದ ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ! Next post ಸಾರ್ವಜನಿಕ ರಸ್ತೆಗೆ ಬೇಲಿ ಹಾಕಿದ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ..!