Appeal to public to complain if objectionable programs are aired on TVs ಟಿವಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಲು ಸಾರ್ವಜನಿಕರಿಗೆ ಮನವಿ

ಟಿವಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಲು ಸಾರ್ವಜನಿಕರಿಗೆ ಮನವಿ

ಶಿವಮೊಗ್ಗ, ಜ. 18 : ಜಿಲ್ಲೆಯಲ್ಲಿ ಕೇಬಲ್ ಟಿವಿ (cabel tv) ಹಾಗೂ ಉಪಗ್ರಹ ಟಿವಿ ವಾಹಿನಿ (satellite tv channels) ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ದೂರುಗಳಿದ್ದಲ್ಲಿ, ಶಿವಮೊಗ್ಗದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ  ದೂರುಗಳನ್ನು ಸಲ್ಲಿಸಬಹುದಾಗಿದೆ.

ಕೇಬಲ್ ಟೆಲಿವಿಷನ್ ನೆಟ್’ವರ್ಕ್ (ರೆಗ್ಯುಲೇಶನ್) ಆಕ್ಟ್ (act) 1995 ರ ಪರಿಚಯದ 6 ಕಾರ್ಯಕ್ರಮ ಸಮಿತಿಯಂತೆ, ಪ್ರಸಾರವಾಗುವ ಕಾರ್ಯಕ್ರಮಗಳು ಸದಭಿರುಚಿ ಅಥವಾ ಸಭ್ಯತೆ ವಿರುದ್ಧ,

ಮಿತ್ರ ರಾಷ್ಟ್ರಗಳ ಟೀಕೆ, ಧರ್ಮ ಸಮುದಾಯ ಅಥವಾ ಧಾರ್ಮಿಕ ಸಮೂಹಗಳನ್ನು ನಿಂದಿಸುವ ಮಾತುಗಳು, ದೃಶ್ಯಗಳು ಅಥವಾ ಕೋಮುವಾದಿ ಭಾವನೆಗಳನ್ನು ಉತ್ತೇಜಿಸುವುದು, ಯಾವುದೇ ಅಸಹ್ಯಕರ, ಮಾನನಷ್ಟ ಮಾಡುವಂತಹ ಉದ್ದೇಶಪೂರ್ವಕ ಸುಳ್ಳು,

ಸೂಚನಾತ್ಮಕ ವ್ಯಂಗ್ಯೋಗ್ತಿ, ಅರ್ಧ ಸತ್ಯ, ಹಿಂಸೆಯನ್ನು ಉತ್ತೇಜಿಸುವ, ಪ್ರಚೋದಿಸುವ, ಕಾನೂನು ಮತ್ತು ಶಿಸ್ತು ಪಾಲನೆ ಕೆಣಕುವುದು, ರಾಷ್ಟ್ರ ವಿರೋಧಿ ಭಾವನೆಯನ್ನು ಉತ್ತೇಜಿಸುವುದು ಅಥವಾ ನ್ಯಾಯಾಲಯ ನಿಂದನೆಗೆ ಕಾರಣವಾಗುವಂತಹ ಅಂಶಗಳು ಕಂಡು ಬಂದರೆ ಯಾವುದೇ ನಾಗರೀಕರು ಅದರ ವಿರುದ್ಧ ವಾರ್ತಾ ಇಲಾಖೆಗೆ ದೂರು ಸಲ್ಲಿಸಬಹುದಾಗಿದೆ.

ಕಾಯ್ದೆಯ ಪರಿಚ್ಛೇದ 7 ರಂತೆ ಜಾಹೀರಾತು ಸಂಹಿತೆಗೆ ಸಂಬಂಧಿಸಿದಂತೆ ಕೇಬಲ್ ಸೇವೆಯಲ್ಲಿ ಪ್ರಸಾರವಾಗುವ ಜಾಹೀರಾತುಗಳು ದೇಶದ ಕಾನೂನುಗಳಿಗೆ ಪೂರಕವಾಗಿರಬೇಕು. ಚಂದದಾರರ ನೈತಿಕತೆ ಮತ್ತು ಸಭ್ಯತೆ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡಬಾರದು.

ಯಾವುದೇ ಮತ, ಜಾತಿ, ವರ್ಣ, ಕೋಮು ಮತ್ತು ರಾಷ್ಟ್ರೀಯತೆಯನ್ನು ಅವಹೇಳನ ಮಾಡಬಾರದು. ಭಾರತ ಸಂವಿಧಾನದ ಯಾವುದೇ ಉಪಬಂಧದ ವಿರುದ್ಧವಿರಬಾರದು. ಜನರನ್ನು ಅಪರಾಧಕ್ಕೆ ಪ್ರಚೋದಿಸುವುದಾಗಲಿ, ಅಶಾಂತಿ ಅಥವಾ ಹಿಂಸೆಗೆ ಯಾವುದೇ ರೀತಿಯ ಅಶ್ಲೀಲತೆಗೆ ಕಾರಣವಾಗುವುದಕ್ಕೆ ಅವಕಾಶ ಉಂಟಾಗಬಾರದು.

ಅಪರಾಧಿಕರಣ ಬಯಸುವಂತೆ ಬಿಂಬಿಸಬಾರದು ಹಾಗೂ ರಾಶಿಯ ಲಾಂಛನ, ಸಂವಿಧಾನದ ಯಾವುದೇ ಭಾಗ ಅಥವಾ ವ್ಯಕ್ತಿ ರಾಷ್ಟ್ರೀಯ ನಾಯಕರ ವ್ಯಕ್ತಿತ್ವ ಅಥವಾ ರಾಷ್ಟ್ರದ ಗಣ್ಯರ ಶೋಷಣೆ ಆಗಬಾರದು. ಇವುಗಳನ್ನು ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಸಾರ್ವಜನಿಕರು ದೂರುಗಳನ್ನು ಸಂಬಂಧಿಸಿದ ಜಿಲ್ಲಾ ನಿರ್ವಹಣಾ ಸಮಿತಿಗೆ ಅಥವಾ ರಾಜ್ಯ ನಿರ್ವಹಣಾ ಸಮಿತಿಗೆ ಸಲ್ಲಿಸಬಹುದಾಗಿದೆ.

ಕೇಬಲ್ ಟಿವಿ ಹಾಗೂ ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಲ್ಲಿ ಯಾವುದೇ ಆಕ್ಷೇಪಗಳು ಕಂಡು ಬಂದಲ್ಲಿ ಜಿಲ್ಲಾ ನಿರ್ವಹಣಾ ಸಮಿತಿ,  ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಅಥವಾ ಮೊಬೈಲ್ ಸಂಖ್ಯೆ 9480841222 ಅಥವಾ ಇ-ಮೇಲ್ ವಿಳಾಸ varthabhavansmg1@gmail.com ಗೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

Today as great patriots why did the Fojus compromise with the British without fighting : CM Siddaramaiah Question ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು : ಸಿಎಂ ಸಿದ್ದರಾಮಯ್ಯ ಪ್ರಶ್ನೆ Previous post ‘ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು’ : ಸಿಎಂ ಸಿದ್ದರಾಮಯ್ಯ ಪ್ರಶ್ನೆ
The arrest of the accused who was carrying dry marijuana, Machu, Birchi, Drager in the Innova car! ಇನ್ನೋವಾ ಕಾರಿನಲ್ಲಿ ಒಣ ಗಾಂಜಾ, ಮಚ್ಚು, ಬರ್ಚಿ, ಡ್ರ್ಯಾಗರ್ ಕೊಂಡೊಯ್ಯುತ್ತಿದ್ದ ಆರೋಪಿಯ ಬಂಧನ! Next post ಇನ್ನೋವಾ ಕಾರಿನಲ್ಲಿ ಒಣ ಗಾಂಜಾ, ಮಚ್ಚು, ಬರ್ಚಿ, ಡ್ರ್ಯಾಗರ್ ಕೊಂಡೊಯ್ಯುತ್ತಿದ್ದವ ಪೊಲೀಸ್ ಬಲೆಗೆ!