ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ ಕಾರ್ಯಕ್ರಮ 

ಶಿವಮೊಗ್ಗ, ಫೆ. 17: ನಟಿ ಪ್ರೇಮಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಪ್ರಯುಕ್ತ ಸಮನ್ವಯ ಟ್ರಸ್ಟ್ ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19ರ ಸಂಜೆ 6ಕ್ಕೆ “ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಕಾರ್ಯಕ್ರಮ ಉದ್ಘಾಟಿಸುವರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪ್ರಶಸ್ತಿ ಪ್ರದಾನ ಮಾಡುವರು. ಹಾರ್ಟ್ ಫುಲ್‌ನೆಸ್ ರಾಜ್ಯ ಸಂಚಾಲಕ ಕೆ.ಮಧುಸೂದನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಕಾರ್ಯನಿರ್ವಾಹಕ ನಿರ್ದೇಶಕ ಅರವಿಂದ್ ಶಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮನ್ವಯ ಟ್ರಸ್ಟ್ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಅಧ್ಯಕ್ಷತೆ ವಹಿಸುವರು.
“ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಕಾರ್ಯಕ್ರಮದ ಜತೆಯಲ್ಲಿ ನೃತ್ಯ ಹಾಗೂ ಗಾಯನ ಕಾರ್ಯಕ್ರಮ ಇರಲಿದೆ. ಪಾಸ್ ಕಡ್ಡಾಯವಾಗಿದ್ದು, ಉಚಿತ ಪಾಸ್‌ಗಳನ್ನು ಪಡೆಯಲು ಇಚ್ಚಿಸುವ ಆಸಕ್ತರು ಮೊಬೈಲ್ ಸಂಖ್ಯೆ 9380233123 ಸಂಪರ್ಕಿಸಬಹುದಾಗಿದೆ.

Previous post ಸಚಿವ ಅಶ್ವತ್ಥ್ ನಾರಾಯಣ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಮನವಿ
Next post ಸಚಿವ ಅಶ್ವತ್ಥ ನಾರಾಯಣ ವಿರುದ್ದ ಪೊಲೀಸ್ ಠಾಣೆಗೆ ದೂರು..!