
ಸಶಸ್ತ್ರ ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷಗೆ ವಸ್ತ್ರ ಸಂಹಿತೆ : ಶೂ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ!
ಶಿವಮೊಗ್ಗ, ಜ. 24: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) – 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಪರೀಕ್ಷಾರ್ಥಿಗಳು ವಸ್ತ್ರ ಸಂಹಿತೆ ಪಾಲಿಸುವುದು ಕಡ್ಡಾಯವಾಗಿದೆ.
ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ.
ಶೂಗಳನ್ನು ಧರಿಸುವಂತಿಲ್ಲ. ತೆಳುವಾದ ಅಡಿ ಭಾಗವಿರುವ ಪಾದರಕ್ಷೆಗಳನ್ನು ಧರಿಸಬೇಕು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ ಎಂದು ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.