J. 29 to Feb. Power outage in villages around Santhekadur of Shimoga taluk till 03 ಜ.29 ರಿಂದ ಫೆ.03 ರವರೆಗೆ ಶಿವಮೊಗ್ಗ ತಾಲೂಕಿನ ಸಂತೇಕಡೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಜ. 29 ರಿಂದ ಫೆ. 03 ರವರೆಗೆ ಶಿವಮೊಗ್ಗ ತಾಲೂಕಿನ ಸಂತೇಕಡೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜ. 25: ಶಿವಮೊಗ್ಗ ತಾಲ್ಲೂಕಿನ ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುರಿಂದ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರುಳಿಹಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Forest department dead line for citizens to return wildlife items including tiger claw..! ಹುಲಿ ಉಗುರು ಸೇರಿದಂತೆ ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ನಾಗರೀಕರಿಗೆ ಅರಣ್ಯ ಇಲಾಖೆ ಡೆಡ್ ಲೈನ್..! Previous post ವನ್ಯಜೀವಿ ವಸ್ತುಗಳನ್ನು ಹಿಂದಿರುಗಿಸಲು ನಾಗರೀಕರಿಗೆ ಅರಣ್ಯ ಇಲಾಖೆ ಡೆಡ್ ಲೈನ್..!
Shimoga District Additional SP Anil Kumar Bhoomareddy who was honored with the President's Medal ರಾಷ್ಟ್ರಪತಿ ಪದಕ ಗೌರವಕ್ಕೆ ಪಾತ್ರರಾದ ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ Next post ರಾಷ್ಟ್ರಪತಿ ಪದಕ ಗೌರವಕ್ಕೆ ಪಾತ್ರರಾದ ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ