
ರಾಷ್ಟ್ರಪತಿ ಪದಕ ಗೌರವಕ್ಕೆ ಪಾತ್ರರಾದ ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ
ಶಿವಮೊಗ್ಗ, ಜ. 26: ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಅನಿಲ್ ಕುಮಾರ್ ಭೂಮರೆಡ್ಡಿ (Anil Kumar Bhoomareddy) ಅವರು ಪ್ರತಿಷ್ಠಿತ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.
1994 ರಲ್ಲಿ ಅನಿಲ್ ಕುಮಾರ್ ಭೂಮರೆಡ್ಡಿ ಅವರು ಪೊಲೀಸ್ ಉಪ ನಿರೀಕ್ಷಕರಾಗಿ (PSI) ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ನಂತರ ಪೊಲೀಸ್ ಇಲಾಖೆಯಲ್ಲಿ ನಿರೀಕ್ಷಕರಾಗಿ (PI), ಪೊಲೀಸ್ ಉಪಾಧೀಕ್ಷಕರಾಗಿ (DYSP), ಹೆಚ್ಚುವರಿ ಅಧೀಕ್ಷಕರಾಗಿ (ASP) ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸಿದ್ದಾರೆ.
ಸದ್ಯ ಅವರು ಶಿವಮೊಗ್ಗ ಜಿಲ್ಲಾ ಎಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2024 ನೇ ಸಾಲಿನ ಗಣರಾಜ್ಯೋತ್ಸವ ನಿಮಿತ್ತ ನೀಡಲಾಗುವ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.
ಅನಿಲ್ ಕುಮಾರ್ ಭೂಮರೆಡ್ಡಿ ಅವರಿಗೆ ಜಿಲ್ಲಾ ಪೊಲೀಸ್ ಇಲಾಖೆವತಿಯಿಂದ ಎಸ್ಪಿ (SP) ಜಿ.ಕೆ.ಮಿಥುನ್ ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಜ. 26 ರಂದು ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿ ಅಭಿನಂದಿಸಿದ್ದಾರೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...