
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಶಿವಮೊಗ್ಗ, ಜ. 26: ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ಅಧ‍್ಯಕ್ಷ ಸ್ಥಾನಗಳ ಜವಾಬ್ದಾರಿ ವಹಿಸಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ (B K Sangameshwar) ಅವರಿಗೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮ (ಕೆ.ಆರ್.ಐ.ಡಿ.ಎಲ್ – ಲ್ಯಾಂಡ್ ಆರ್ಮಿ) ಅಧ್ಯಕ್ಷ ಸ್ಥಾನಕ್ಕೆ ನೇಮಿಸಲಾಗಿದ್ದರೆ,
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ‍್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಮೂವರು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಅಂತಿಮವಾಗಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಲಾಗಿತ್ತು.
ಮುಂದಿನ ದಿನಗಳಲ್ಲಿ ಸರ್ಕಾರದ ಹಂತದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನು ಕಾಂಗ್ರೆಸ್ ವರಿಷ್ಠರು ಬಿ.ಕೆ.ಸಂಗಮೇಶ್ವರ್ ಹಾಗೂ ಬೇಳೂರು ಗೋಪಾಲಕೃಷ್ಣ ಅವರಿಗೆ ನೀಡಿದ್ದರು. ಇದೀಗ ನಿಗಮ ಮಂಡಳಿಗಳ ಜವಾಬ್ದಾರಿವಹಿಸಲಾಗಿದೆ.