Bike theft in KAS officer's house premises: Scene captured on CC camera! ಕೆಎಎಸ್ ಅಧಿಕಾರಿ ಮನೆ ಆವರಣದಲ್ಲಿ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!

ಕೆಎಎಸ್ ಅಧಿಕಾರಿ ಮನೆ ಆವರಣದಲ್ಲಿ ಬೈಕ್ ಕಳವು : ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!

ಶಿವಮೊಗ್ಗ, ಜ. 27: ಹಿರಿಯ ಕೆಎಎಸ್ ಅಧಿಕಾರಿಯೋರ್ವರ ಮನೆ ಆವರಣದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು, ಯುವಕನೋರ್ವ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯ ಮನೆಯಲ್ಲಿ ಆಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಹಿಂದೆ ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ, ಪ್ರಸ್ತುತ ಬೆಂಗಳೂರಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಹಿರಿಯ ಕೆಎಎಸ್ ಅಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರ ಶಿವಮೊಗ್ಗದ ಶರಾವತಿ ನಗರದ ನಿವಾಸದಲ್ಲಿ ಘಟನೆ ನಡೆದಿದೆ.

ಶುಕ್ರವಾರ ಮಧ್ಯಾಹ್ನದ ಸಮಯದಲ್ಲಿ ಅವರ ನಿವಾಸದ ಆವರಣದಿಂದ ಹೋಂಡಾ ಆಕ್ಟಿವಾ ವಾಹನವನ್ನು ಯುವಕನೋರ್ವ ಕಳವು ಮಾಡಿ ಕೊಂಡೊಯ್ದಿದ್ದಾನೆ.  ಈ ದೃಶ್ಯ ಮನೆಯ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸದರಿ ಸಿಸಿ ಕ್ಯಾಮರಾದ ದೃಶ್ಯಾವಳಿಯನ್ನು ಅಧಿಕಾರಿ ಕುಟುಂಬದವರು ಪೊಲೀಸರಿಗೆ ನೀಡಿದ್ದಾರೆ. ಇದರ ಆಧಾರದ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ಕಳ್ಳನ ಪತ್ತೆ ಕಾರ್ಯ ಕೈಗೊಂಡಿದ್ದಾರೆ.

'The British ruled India for 400 years only because of our machinations and conspiracies' : Chief Minister Siddaramaiah ‘ನಮ್ಮವರ ಕುತಂತ್ರ - ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು’ : ಮುಖ್ಯಮಂತ್ರಿ ಸಿದ್ದರಾಮಯ್ಯ Previous post ‘ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು’ : ಮುಖ್ಯಮಂತ್ರಿ ಸಿದ್ದರಾಮಯ್ಯ
'The salvation of the country is possible with value-based politics': Former Speaker DH Shankaramurthy's opinion ಮೌಲ್ಯಾಧಾರಿತ ರಾಜಕಾರಣದಿಂದ ದೇಶದ ಉದ್ಧಾರ ಸಾಧ್ಯ : ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಭಿಪ್ರಾಯ Next post ‘ಮೌಲ್ಯಾಧಾರಿತ ರಾಜಕಾರಣದಿಂದ ದೇಶದ ಉದ್ಧಾರ ಸಾಧ್ಯ’ : ಮಾಜಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅಭಿಪ್ರಾಯ