'I too am a Hindu I love people of all religions': Chief Minister Siddaramaiah ‘ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ’ : ಮುಖ್ಯಮಂತ್ರಿ ಸಿದ್ದರಾಮಯ್ಯ

‘ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ’ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜ. 29: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.  ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ.*

ಬಿಜೆಪಿಯವರು ಅನಗತ್ಯವಾಗಿ  ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ  ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು. 

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ  ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.

ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದು ತಿಳಿಸಿದ್ದಾರೆ.

Andar-Bahar Ispeet Gambling at Shimoga Temporary Employees Association Recreation Club :18 people arrested ಶಿವಮೊಗ್ಗದ ಹಂಗಾಮಿ ನೌಕರರ ಸಂಘದ ರಿಕ್ರಿಯೇಷನ್ ಕ್ಲಬ್ ನಲ್ಲಿ ಅಂದರ್ - ಬಾಹರ್ ಇಸ್ಪೀಟ್ ಜೂಜು : 18 ಜನರ ಬಂಧನ Previous post ಶಿವಮೊಗ್ಗದ ಹಂಗಾಮಿ ನೌಕರರ ಸಂಘದ ರಿಕ್ರಿಯೇಷನ್ ಕ್ಲಬ್ ನಲ್ಲಿ ಅಂದರ್  – ಬಾಹರ್ ಇಸ್ಪೀಟ್ ಜೂಜು : 18 ಜನರ ಬಂಧನ
Shimoga: Sewer slab collapsed and person died on the spot! ಶಿವಮೊಗ್ಗ : ಚರಂಡಿ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲಿಯೇ ಸಾವು! Next post ಶಿವಮೊಗ್ಗ : ಚರಂಡಿ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲಿಯೇ ಸಾವು!