'Mahatma Gandhi Greatest Hindu: Jai Shriram is not BJP's property' - CM Siddaramaiah ‘ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ : ಜೈ ಶ್ರೀರಾಮ್ ಎಂಬುದು ಬಿಜೆಪಿಯವರ ಸ್ವತ್ತಲ್ಲ’ – ಸಿಎಂ ಸಿದ್ದರಾಮಯ್ಯ

‘ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ : ಜೈ ಶ್ರೀರಾಮ್ ಎಂಬುದು ಬಿಜೆಪಿಯವರ ಸ್ವತ್ತಲ್ಲ’ – ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ. 30 : ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ. ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ  KPCC ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ  ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಗೋಡ್ಸೆ ಬಿಜೆಪಿಯವರ ಆರಾಧ್ಯ ದೈವ:

ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು.  ಗಾಂಧಿಜೀಯವರನ್ನು ಹತ್ಯೆಗೈದ ಗೋಡ್ಸೆ ಆರ್ ಎಸ್ ಎಸ್ ಸಂಘಟನೆ ಹಾಗೂ ಬಿಜೆಪಿಯವರ ಆರಾಧ್ಯ ದೈವ. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ. ಮಹಾತ್ಮಾ ಗಾಂಧಿಜೀ ಒಬ್ಬ ಶ್ರೇಷ್ಠ ಹಿಂದೂ. ಅಂತಹ ಹಿಂದೂ ಭಕ್ತನನ್ನೇ ಗುಂಡಿಕ್ಕಿ ಕೊಂದವರೇ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ ಎಂದರು.

ಗಾಂಧೀಜಿಯವರನ್ನು ಮಾತ್ರ ಮಹಾತ್ಮ ಮತ್ತು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅವರು ತಮ್ಮ ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನು ಪಾಲಿಸಿದರು. ಗಾಂಧಿಜೀಯವರು ನುಡಿದಂತೆ ನಡೆಯುತ್ತಿದ್ದರು. ದೇಶ ವಿಭಜನೆಯಾದಾಗ ಸ್ವಾತಂತ್ರ್ಯವನ್ನು ಸಂಭ್ರಮಿಸದೇ ಹಿಂದೂ ಮುಸಲ್ಮಾನರ ನಡುವೆ ಸೌಹಾರ್ದತೆಯನ್ನು ಸ್ಥಾಪಿಸಲು ಗಾಂಧೀಜೀಯವರು ಶ್ರಮಿಸಿದರು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಒಳಿತನ್ನು ಬಯಸುತ್ತದೆ

ದೇಶ ರಾಮರಾಜ್ಯವಾಗಬೇಕೆಂಬ ಚಿಂತನೆಯುಳ್ಳ ಗಾಂಧೀಜಿಯವರನ್ನು ಕೊಂದ ಗೋಡ್ಸೆಯನ್ನು ಬೆಂಬಲಿಸುವವರು ‘ತಾವು ಮಾತ್ರ ಹಿಂದೂಗಳು’ ಎಂದು ಪ್ರತಿಪಾದಿಸುತ್ತಿದ್ದಾರೆ. ಮನುಷ್ಯರ ನಡುವೆ ವೈಷಮ್ಯ ಬೆಳೆಸುವುದನ್ನು ಯಾವ ಧರ್ಮವೂ ಬೋಧಿಸುವುದಿಲ್ಲ. ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಒಳಿತನ್ನು ಬಯಸುವ ಹಾಗೂ ಸರ್ವ ಧರ್ಮಗಳನ್ನು ಗೌರವಿಸುವ ಪಕ್ಷ. ಮಹಾತ್ಮಾಗಾಂಧೀಜಿಯವರು ತೋರಿದ ಹಾದಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ. ಸಮಾಜದಲ್ಲಿನ ಅಸಮಾನತೆಯನ್ನು ತೊಡೆದು, ಮಾನವರಾಗಿ  ಸಾಮರಸ್ಯದಿಂದ ಬಾಳುವುದೇ ನಮ್ಮ ಮುಂದಿರುವ ಸವಾಲು ಎಂದರು.

ಶ್ರೀರಾಮನನ್ನು ರಾಜಕೀಯವಾಗಿ ಬಳಸುವ ಬಿಜೆಪಿ

ಬಿಜೆಪಿಯವರು ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಾರೆ. ರಾಮಭಕ್ತರಾಗಿದ್ದ ಗಾಂಧೀಜಿಯವರ ಹತ್ಯೆಗೈದ ಗೋಡ್ಸೆಯನ್ನು ಪಾಲಿಸುವವರನ್ನು ಜನರು ನಂಬುವುದಿಲ್ಲ. ಎಲ್ಲರನ್ನೂ ಸಮನಾಗಿ ಕಾಣುವ ರಾಮನ ಆದರ್ಶವನ್ನು ನಿಜಅರ್ಥದಲ್ಲಿ ಪಾಲಿಸುವ ನಾನು ಜನವರಿ 22 ರಂದು ನೂತನ ಶ್ರೀರಾಮ ಮಂದಿರವನ್ನು ಸ್ಥಳೀಯವಾಗಿ ಉದ್ಘಾಟಿಸಿದೆ. ‘ಜೈ ಶ್ರೀರಾಮ್ ’ ಎಂಬುದು ಬಿಜೆಪಿಯವರ ಸ್ವತ್ಥಲ್ಲ. ಮಹಾತ್ಮಾ ಗಾಂಧೀಜಿಯವರೇ ‘ಹೇ ರಾಮ್’ ಎಂದು ಹೇಳಿದ್ದರು.

ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ  ಗಾಂಧೀಜಿಯವರಿಗೆ ಸಲ್ಲಿಸುವ ಗೌರವ

ಬಿಜೆಪಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಕೇವಲ ಬಾಯಿಮಾತಾಗಿದ್ದು, ಜಾತ್ಯಾತೀತತೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಆದರೆ ಈ ಮಾತಿಗೆ ವಿರುದ್ಧವಾಗಿ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ವಾಸ್ತವವಾಗಿ  ದೇಶದ ಐಕ್ಯತೆ, 143 ಕೋಟಿ ಜನ ಅನ್ಯೋನ್ಯವಾಗಿ ಸೌಹಾರ್ದಯುತವಾಗಿ ಬಾಳ ಬೇಕಾದರೆ ಯಾರನ್ನೂ ಕೂಡ ದ್ವೇಷಿಸಬಾರದು.

ದೇಶಭಕ್ತಿಯ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡುವ ಅಗತ್ಯವಿಲ್ಲ. ಬಿಜೆಪಿಯವರಿಗೆ ದೇಶದ ಇತಿಹಾಸವೇ ತಿಳಿದಿಲ್ಲ. ಅದಕ್ಕೆ ಅಂಬೇಡ್ಕರ್ ಅವರು ಯಾರಿಗೆ ಇತಿಹಾಸ ತಿಳಿದಿಲ್ಲವೋ ಅವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ ಎಂದಿದ್ದು. ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ  ಗಾಂಧೀಜಿಯವರಿಗೆ ಸಲ್ಲಿಸುವ ಗೌರವ.  ಅವರು ಅಧಿಕಾರದಲ್ಲಿರಬಾರದು. ದೇಶದಲ್ಲಿ ಐಕ್ಯತೆ , ಶಾಂತಿಯಿಂದ ಇರಲು, ಎಲ್ಲರೂ ಮನುಷ್ಯರಾಗಿ ಬಾಳಬೇಕಾದರೆ ಜಾತ್ಯಾತೀತತೆಯಲ್ಲಿ ನಂಬಿಕೆ ಇರಬೇಕು.  ಗಾಂಧಿಯವರನ್ನು ಸ್ಮರಿಸಿ, ಅವರು  ನಡೆದ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ ಎಂದರು.

Death of a 6-year-old girl who was playing in the park : Protest demanding action against the culprits ಶಿವಮೊಗ್ಗ - ಪಾರ್ಕ್ ನಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿ ಸಾವು ಪ್ರಕರಣ : ಡಿಸಿ ಕಚೇರಿ ಎದುರು ಪ್ರತಿಭಟನೆ Previous post ಶಿವಮೊಗ್ಗ – ಪಾರ್ಕ್ ನಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿ ಸಾವು ಪ್ರಕರಣ : ಡಿಸಿ ಕಚೇರಿ ಎದುರು ಪ್ರತಿಭಟನೆ
Officials in our government must be completely committed to secularism and the Constitution: Otherwise such people are not allowed to continue here: Chief Minister Siddaramaiah warns in a meeting of district in-charge secretaries ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ* ಐಎಎಸ್ ಅಧಿಕಾರಿಗಳಿಗೆ ಸಿಎಂ ನೀಡಿದ ಎಚ್ಚರಿಕೆಯೇನು? What was the warning given by the CM to the IAS officers? Next post ಐಎಎಸ್ ಅಧಿಕಾರಿಗಳಿಗೆ ಸಿಎಂ ನೀಡಿದ ಎಚ್ಚರಿಕೆಯೇನು?