Doctors at Surgi Hospital saved the life of an 11-month-old child by removing a fish from his throat 11 ತಿಂಗಳ ಮಗುವಿನ ಗಂಟಲಲ್ಲಿದ್ದ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

11 ತಿಂಗಳ ಮಗುವಿನ ಗಂಟಲಲ್ಲಿದ್ದ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

ಶಿವಮೊಗ್ಗ, ಫೆ. 6: ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ  ಪಾರು ಮಾಡಿದ್ದಾರೆ. 

ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಮತ್ತು ರೋಜಾ ದಂಪತಿಯ  11 ತಿಂಗಳ ಮಗು ಪ್ರತೀಕ್‌ ಮನೆಯೊಳಗೆ ಆಟವಾಡುತ್ತಿದ್ದಾಗ ಮೀನನ್ನು ನುಂಗಿ ಬಿಟ್ಟಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರ ತೆಗೆಯಲು ಪ್ರಯತ್ನ ನಡೆಸಿದ್ದರಾದರೂ ಯಶಸ್ವಿ ಆಗಿರಲಿಲ್ಲ.

ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞ ವೈದ್ಯರು ತೀವ್ರ ನಿಗಾಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರ ತೆಗೆದು ಮಗುವಿನ ಜೀವವನ್ನು ಉಳಿಸಿದ್ದಾರೆ. ಇದೊಂದು ಅಪರೂಪದ ಪ್ರಕರಣವಾಗಿದೆ. ಈ ಪ್ರಕರಣದಲ್ಲಿ ಮಗುವಿಗೆ ಮಕ್ಕಳ ತಜ್ಞ ವೈದ್ಯ ಡಾ.ಪ್ರದೀಪ್‌ ಚಿಕಿತ್ಸೆ ಅವರು ನೀಡಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. 

ಚಿಕ್ಕಮಕ್ಕಳು ಈ ರೀತಿ ಆಹಾರ ಪದಾರ್ಥ, ಇಲ್ಲವೇ ಚಾಕೋಲೇಟ್‌, ಕಾಡಿಗೆ ಡಬ್ಬಿ, ಅಡಕೆ, ಗೋಲಿ, ಗಜಗ, ಶೇಂಗಾ ಬೀಜದಂತಹ ವಸ್ತುಗಳನ್ನು ಗಂಟಲಲ್ಲಿ ಸಿಕ್ಕಿಸಿಕೊಂಡು ಪ್ರಾಣಕ್ಕೆ ಎರವಾದಂತಹ ಘಟನೆಗಳು ಈ ಹಿಂದೆ ನಡೆದಿದ್ದವು.  ಪೋಷಕರು ಚಿಕ್ಕಮಕ್ಕಳ ಕೈಗೆ ಯಾವುದೇ ಘನ ವಸ್ತುಗಳನ್ನು ಸಿಗದಂತೆ ಇಡಬೇಕು ಎಂದು  ತೀವ್ರ ನಿಗಾ ಘಟಕ ಹಾಗೂ ಶಸ್ತ್ರ ಚಿಕಿತ್ಸಾ ಘಟಕದ ತಜ್ಞ ವೈದ್ಯರಾದ ಡಾ.ವಿನೋದ್‌ ಸಲಹೆ ನೀಡಿದ್ದಾರೆ. ವೈದ್ಯರ ಸೇವೆಯನ್ನು ಸರ್ಜಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ಹಾಗೂ  ಮೆಡಿಕಲ್‌ ಸೂಪರಿಂಟೆಂಡೆಂಟ್‌ ಡಾ.ಪ್ರಶಾಂತ್‌ ಅವರು ಶ್ಲಾಘಿಸಿದ್ದಾರೆ.

Reduction in price of milk purchased from farmers : BJP protests with cows in front of DC office in Shimoga ರೈತರಿಂದ ಖರೀದಿಸುವ ಹಾಲಿನ ದರ ಕಡಿತ : ಶಿವಮೊಗ್ಗದಲ್ಲಿ ಡಿಸಿ ಕಚೇರಿ ಎದುರು ಗೋವುಗಳೊಂದಿಗೆ ಬಿಜೆಪಿ ಪ್ರತಿಭಟನೆ Previous post ರೈತರಿಂದ ಖರೀದಿಸುವ ಹಾಲಿನ ದರ ಕಡಿತ : ಶಿವಮೊಗ್ಗದ ಡಿಸಿ ಕಚೇರಿ ಎದುರು ಗೋವುಗಳೊಂದಿಗೆ ಬಿಜೆಪಿ ಪ್ರತಿಭಟನೆ
NSUI attempt to lay siege to Shimoga residence of BJP state president! ಬಿಜೆಪಿ ರಾಜ್ಯಾಧ್ಯಕ್ಷರ ಶಿವಮೊಗ್ಗ ನಿವಾಸಕ್ಕೆ ಎನ್.ಎಸ್.ಯು.ಐ ಮುತ್ತಿಗೆ ಯತ್ನ! Next post ಬಿಜೆಪಿ ರಾಜ್ಯಾಧ್ಯಕ್ಷರ ಶಿವಮೊಗ್ಗ ನಿವಾಸಕ್ಕೆ ಎನ್.ಎಸ್.ಯು.ಐ ಮುತ್ತಿಗೆ ಯತ್ನ!