Unidentified vehicle collision: A leopard was killed while crossing the road ಅಪರಿಚಿತ ವಾಹನ ಡಿಕ್ಕಿ : ರಸ್ತೆ ದಾಟುತ್ತಿದ್ದ ಚಿರತೆ ಸಾವು

ಅಪರಿಚಿತ ವಾಹನ ಡಿಕ್ಕಿ : ರಸ್ತೆ ದಾಟುತ್ತಿದ್ದ ಚಿರತೆ ಸಾವು

ಶಿವಮೊಗ್ಗ, ಫೆ. 7: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಡು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕರಕುಚ್ಚಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಆಯನೂರು – ಹಣಗೆರೆಕಟ್ಟೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಚಿರತೆಯು ರಸ್ತೆ ದಾಟಲು ಯತ್ನಿಸುತ್ತಿರುವ ವೇಳೆ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಚಿರತೆ ಮುಖಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸುಮಾರು ಒಂದೂವರೆ ವರ್ಷ ಪ್ರಾಯದ್ದಾಗಿದೆ. ಘಟನಾ ಸ್ಥಳಕ್ಕೆ ವನ್ಯಜೀವಿ ವಿಭಾಗದ ಡಿಎಫ್ಓ ಪ್ರಸನ್ನಕೃಷ್ಣ ಪಟೇಗಾರ್, ಆರ್.ಎಫ್.ಓ ವಿಜಯಕುಮಾರ್ ಮತ್ತವರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.

ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ನಿಯಮಾನುಸಾರ ಚಿರತೆಯ ಕಳೇಬರಕ್ಕೆ ಅಗ್ನಿಸ್ಪರ್ಶ ಮಾಡಿ ಸುಡಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

NSUI attempt to lay siege to Shimoga residence of BJP state president! ಬಿಜೆಪಿ ರಾಜ್ಯಾಧ್ಯಕ್ಷರ ಶಿವಮೊಗ್ಗ ನಿವಾಸಕ್ಕೆ ಎನ್.ಎಸ್.ಯು.ಐ ಮುತ್ತಿಗೆ ಯತ್ನ! Previous post ಬಿಜೆಪಿ ರಾಜ್ಯಾಧ್ಯಕ್ಷರ ಶಿವಮೊಗ್ಗ ನಿವಾಸಕ್ಕೆ ಎನ್.ಎಸ್.ಯು.ಐ ಮುತ್ತಿಗೆ ಯತ್ನ!
The accused had mortgaged the stolen gold jewelery in private finance! ಕಳವು ಚಿನ್ನಾಭರಣಗಳನ್ನ ಖಾಸಗಿ ಫೈನಾನ್ಸ್ ಗಳಲ್ಲಿ ಅಡಮಾನವಿಟ್ಟಿದ್ದ ಆರೋಪಿ! 10 ಲಕ್ಷ ರೂ. ಮೌಲ್ಯದ ನಗನಾಣ್ಯ ವಶಕ್ಕೆ ಪಡೆದ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು Next post ಕಳವು ಚಿನ್ನಾಭರಣಗಳನ್ನ ಖಾಸಗಿ ಫೈನಾನ್ಸ್ ಗಳಲ್ಲಿ ಅಡಮಾನವಿಟ್ಟಿದ್ದ ಆರೋಪಿ!