Collector's permission is mandatory for children acting in movies /serials! Collector's permission is mandatory for children acting in movies /serials! ಸಿನಿಮಾ / ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ!

ಸಿನಿಮಾ / ಧಾರವಾಹಿಗಳಲ್ಲಿ ಮಕ್ಕಳ ನಟನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ!

ಶಿವಮೊಗ್ಗ ಫೆ. 23:   ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟರು / ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಜಿಲ್ಲಾಧಿಕಾರಿಗಳಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ.

ಈ ಕುರಿತಂತೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪ್ರಕಟಣೆ ಬಿಡುಗಡೆ ಮಾಡಿದೆ. ಬಾಲ ಹಾಗೂ ಕಿಶೋರಾ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಕರ್ನಾಟಕ ನಿಯಮಗಳ 2 ಸಿ ರಲ್ಲಿ ಮಗು (1) ಕಲಂ 3 ರ ನಿಬಂಧನೆಗಳ ನಿಯಮಾನುಸಾರ, ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಬಾಲ ನಟ – ನಟಿಯರ ಪಾತ್ರಕ್ಕೆ ಮಕ್ಕಳನ್ನು ಬಳಸಿಕೊಳ್ಳಲು ಅನುಮತಿ ಕಡ್ಡಾಯವಾಗಿದೆ ಎಂದು ತಿಳಿಸಿದೆ.

ನಿಯಮ ಪಾಲನೆ ಕಡ್ಡಾಯ : ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಯನ್ವಯ ಮುಚ್ಚಳಿಕೆಯನ್ನು ಆಯೋಜಕರು ನೀಡಬೇಕು.

ಈ ರೀತಿಯ ಮಕ್ಕಳನ್ನು 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ಇರುವುದಿಲ್ಲ. ಮಗುವಿನ ರಕ್ಷಣೆಗೆ ಪ್ರತಿ 5 ಮಕ್ಕಳಿಗೆ ಓರ್ವರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು ಹಾಗೂ ಕಾರ್ಯಕ್ರಮದಿಂದ ಬರುವ ಆದಾಯದಲ್ಲಿ ಕನಿಷ್ಠ  ಶೇ.20% ರಷ್ಟು ಮಗುವಿನ ಹೆಸರಿಗೆ ನಿಶ್ಚಿತ ಠೇವಣಿ ಇಡಬೇಕು.

ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಮಕ್ಕಳನ್ನು ಬಳಸಿಕೊಂಡಲ್ಲಿ ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರವಾಹಿ ಆಯೋಜಕರು / ನಿರ್ಮಾಪಕರು ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Minister Satish Jarakiholi praised Union Minister Nitin Gadkari! ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಹೊಗಳಿದ ಸಚಿವ ಸತೀಶ್ ಜಾರಕಿಹೊಳಿ! Previous post ಕೇಂದ್ರ  ಸಚಿವ ನಿತಿನ್ ಗಡ್ಕರಿ ಗುಣಗಾನ ಮಾಡಿದ ಸಚಿವ ಸತೀಶ್ ಜಾರಕಿಹೊಳಿ..!
Demand to name 'S.Bangarappa Nagar' for Shimoga Bommanakatte shelter area ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ‘ಎಸ್.ಬಂಗಾರಪ್ಪ ನಗರ’ ಹೆಸರಿಡಲು ಆಗ್ರಹ Next post ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಎಸ್.ಬಂಗಾರಪ್ಪ ನಗರ ಹೆಸರಿಡಲು ಆಗ್ರಹ