Self-declaration of 'unemployed' 'not continuing studies' 'not self-employed' is mandatory : otherwise the allowance will be suspended..! #ಯುವನಿಧಿ, #yuvanidhi, ‘ನಿರುದ್ಯೋಗಿ’, ‘ವ್ಯಾಸಂಗ ಮುಂದುವರೆಸುತ್ತಿಲ್ಲ’, ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಸ್ವಯಂ ಘೋಷಣೆ ಕಡ್ಡಾಯ : ಇಲ್ಲದಿದ್ದರೆ ಬಂದ್ ಆಗಲಿದೆ ಭತ್ಯೆ..!

‘ನಿರುದ್ಯೋಗಿ’, ‘ವ್ಯಾಸಂಗ ಮುಂದುವರೆಸುತ್ತಿಲ್ಲ’, ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಸ್ವಯಂ ಘೋಷಣೆ ಕಡ್ಡಾಯ : ಇಲ್ಲದಿದ್ದರೆ ಬಂದ್ ಆಗಲಿದೆ ಭತ್ಯೆ..!

ಬೆಂಗಳೂರು, ಫೆ. 26: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಯುವನಿಧಿ’ಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಮತ್ತೊಂದು ಹೊಸ ನಿಯಮ ಅಳವಡಿಸಿದೆ.

ಯೋಜನೆಯಡಿ ಈಗಾಗಲೇ ಧನ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ‘ತಾನು ನಿರುದ್ಯೋಗಿ’, ‘ವ್ಯಾಸಂಗ ಮುಂದುವರೆಸುತ್ತಿಲ್ಲ’ ಹಾಗೂ ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಸ್ವಯಂ ಘೋಷಣೆಯ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ!

ಪ್ರಸ್ತಕ ಫೆಬ್ರವರಿ ಮಾಹೆಯಲ್ಲಿ 29-02-2024 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ, ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಸ್ಥಗಿತಗೊಳ್ಳಲಿದೆ ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಯೋಜನೆಯಡಿ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ, ಜನವರಿ 2024 ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ. ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್‌ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್‌ಸೈಟ್ ವೀಕ್ಷಿಸಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 080-25189112 ಸಂಪರ್ಕಿಸಬಹುದು ಎಂದು ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೌಲಭ್ಯ: ಯುವನಿಧಿ ಯೋಜನೆಯಡಿ ಪದವಿ, ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23 ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ, 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.

Repaired government bus: Shimoga MP helped passengers! ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ! Previous post ದುರಸ್ತಿಗೀಡಾದ ಸರ್ಕಾರಿ ಬಸ್ : ಪ್ರಯಾಣಿಕರಿಗೆ ನೆರವಾದ ಶಿವಮೊಗ್ಗ ಸಂಸದ!
Recognition of immorality increase in corruption 'Greed is the root of corruption': Retired Lokayukta Santosh Hegde ಅನೈತಿಕತೆಗೆ ಮನ್ನಣೆ ಭ್ರಷ್ಟಾಚಾರದ ಹೆಚ್ಚಳ ‘ದುರಾಸೆಯೇ ಭ್ರಷ್ಟಾಚಾರದ ಮೂಲ’ : ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ Next post ‘ದುರಾಸೆಯೇ ಭ್ರಷ್ಟಾಚಾರದ ಮೂಲ’ : ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ