
ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆ!
ನವದೆಹಲಿ, ಮಾ. 8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ (central govt) ಅಡುಗೆ ಅನಿಲ ಸಿಲಿಂಡರ್ (Cooking gas cylinder) ಬೆಲೆಯಲ್ಲಿ 100 ರೂಪಾಯಿ ಕಡಿತಗೊಳಿಸಿದೆ.
‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (international women’s day) ದಿನದಂದು ನಮ್ಮ ಸರ್ಕಾರವು ಎಲ್.ಪಿ.ಜಿ ಸಿಲಿಂಡರ್ (cylinder) ಬೆಲೆಯಲ್ಲಿ 100 ರೂ. ಕಡಿತ ಮಾಡುತ್ತಿದೆ. ಇದರಿಂದ ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಾರಿಶಕ್ತಿಗೆ ಪ್ರಯೋಜನವಾಗಲಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (prime minister narendra modi) ಅವರು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ.
ಅಡುಗೆ ಅನಿಲ ಸಿಲಿಂಡರ್ ನ್ನು ಕೈಗೆಟಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮ ನೋಡಿಕೊಳ್ಳುತ್ತೆವೆ. ಆರೋಗ್ಯಕರ ವಾತಾವರಣ ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೆವೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಸಂಸದ ಬಿವೈಆರ್ ಮೆಚ್ಚುಗೆ : ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕ್ರಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರ (shimoga lok sabha constituency) ದ ಸದಸ್ಯ ಬಿ.ವೈ.ರಾಘವೇಂದ್ರ (mp b y raghavendra) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಶುಕ್ರವಾರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಪರಿಷ್ಕೃತ ದರಗಳು ಮಾರ್ಚ್ 8, 2024 ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ದರ ಇಳಿಕೆಯ ನಂತರ ಶಿವಮೊಗ್ಗದಲ್ಲಿ ಸಿಲಿಂಡರ್ ಬೆಲೆಯು 916 ರೂ.ಗಳಿಂದ 816 ರೂ.ಗೆ ಇಳಿಕೆಯಾಗಲಿದೆ. ಹಾಗೂ ಪ್ರಧಾನಮಂತ್ರಿ ಉಜ್ವಲ ಯೋಜನೆ (pmuy) ಫಲಾನುಭವಿಗಳಿಗೆ, ಎಲ್.ಪಿ.ಜಿ ಸಿಲಿಂಡರ್ ಬೆಲೆಯು 516 ರೂ. ಆಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಮಾ. 7 ರಂದು ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಮುಂದುವರಿಸಲು ಅನುಮೋದನೆ ನೀಡಿದೆ. ಇದರಿಂದ ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.