ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಎಸ್.ಬಂಗಾರಪ್ಪ ಹೆಸರಿಡಲು ಹುಲ್ತಿಕೊಪ್ಪ ಶ್ರೀಧರ್ ಆಗ್ರಹ

ಶಿವಮೊಗ್ಗ, ಫೆ. 20: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿಡಬೇಕು ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಆಗ್ರಹಿಸಿದ್ದಾರೆ.
ಶಿವಮೊಗ್ಗ ನಗರದ ಈಡಿಗರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಈಡಿಗ ಸಮಾಜದ ಶ್ರೇಯೋಭಿವೃದ್ದಿಗೆ ಪ್ರತ್ಯೇಕ ಅಭಿವೃದ್ದಿ ನಿಗಮ ಸ್ಥಾಪಿಸಬೇಕು. ತಕ್ಷಣವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಹುಲ್ತಿಕೊಪ್ಪ ಶ್ರೀಧರ್ ಒತ್ತಾಯಿಸಿದ್ದಾರೆ.
ಗೋಷ್ಠಿಯಲ್ಲಿ ಈಡಿಗ ಸಮಾಜದ ಪ್ರಮುಖರಾದ ಗೀತಾಂಜಲಿ ದತ್ತಾತ್ರೇಯ, ಜಿ.ಡಿ.ಮಂಜುನಾಥ್, ಪ್ರವೀಣ್, ಎಸ್.ಎಂ.ಹರೀಶ್,ಹೊನ್ನಪ್ಪ, ಧರ್ಮದಾಸ್, ಈಶ್ವರಪ್ಪ, ಲತಾ, ವೀಣಾ ಸೇರಿದಂತೆ ಮೊದಲಾದವರಿದ್ದರು.

Previous post ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ!
Next post 👉 ಶಿವಮೊಗ್ಗ : ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಅನುಮತಿ! 👉 ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ