Capital investment of ₹ 17836 crore in state - 27067 new jobs created : CM ರಾಜ್ಯದಲ್ಲಿ ₹ 17836 ಕೋಟಿ ಮೊತ್ತದ ಬಂಡವಾಳ ಹೂಡಿಕೆ - 27067 ಹೊಸ ಉದ್ಯೋಗ ಸೃಷ್ಟಿ: ಸಿಎಂ

ರಾಜ್ಯದಲ್ಲಿ ₹ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ – 27,067 ಹೊಸ ಉದ್ಯೋಗ ಸೃಷ್ಟಿ : ಸಿಎಂ

ಬೆಂಗಳೂರು, ಮಾ. 8: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ  ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067  ಉದ್ಯೋಗಗಳನ್ನು ಸೃಷ್ಟಿಸುವ  ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ  ಅನುಮೋದನೆ  ದೊರೆತಿದ್ದು, ಇದರಲ್ಲಿ  ₹ 8220.05  ಕೋಟಿ ಮೊತ್ತದ   6  ಹೊಸ ಯೋಜನೆಗಳು ಮತ್ತು   ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ  8 ಯೋಜನೆಗಳು ಇವೆ.

ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ  ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ  ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆʼ ಎಂದು ಅವರು ಮಾಹಿತಿ ನೀಡಿದ್ದಾರೆ. 

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ  ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು :  ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್  ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು : ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ  ಸಾಮರ್ಥ್ಯ  ವಿಸ್ತರಣೆ ಉದ್ದೇಶದ  ಹೆಚ್ಚುವರಿ ಹೂಡಿಕೆಯ  8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ – ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ  ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್), 

ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್

ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು  ₹ 9,615.85 ಕೋಟಿಗಳಷ್ಟಿದೆ. ಅಭಿವೃದ್ಧಿ ಆಯುಕ್ತೆ  ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ  ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Cooking gas cylinder price cut by Rs 100 in government's Women's Day gift ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆ! Previous post ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆ!
Shimoga Lok Sabha Constituency: Congress ticket for Geetha Shivarajkumar - Where did Kumar Bangarappa miss the 'hand'? Minister Madhu Bangarappa prevailed! Special Report: B. Renukesh ಶಿವಮೊಗ್ಗ ಲೋಕಸಭಾ ಕ್ಷೇತ್ರ : ಗೀತಾ ಶಿವರಾಜಕುಮಾರ್’ಗೆ ಕಾಂಗ್ರೆಸ್ ಟಿಕೆಟ್ – ಕುಮಾರ್ ಬಂಗಾರಪ್ಪಗೆ ‘ಕೈ’ ತಪ್ಪಿದ್ದೆಲ್ಲಿ? ಸಚಿವ ಮಧು ಬಂಗಾರಪ್ಪ ಮೇಲುಗೈ! ವಿಶೇಷ ವರದಿ : ಬಿ. ರೇಣುಕೇಶ್ Next post ಶಿವಮೊಗ್ಗ ಲೋಕಸಭಾ ಕ್ಷೇತ್ರ : ಗೀತಾ ಶಿವರಾಜಕುಮಾರ್’ಗೆ ಕಾಂಗ್ರೆಸ್ ಟಿಕೆಟ್ – ಕುಮಾರ್ ಬಂಗಾರಪ್ಪಗೆ ‘ಕೈ’ ತಪ್ಪಿದ್ದೆಲ್ಲಿ?