
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡ ಕಡೆಗಣನೆ : ಎಎಪಿ ಪ್ರತಿಭಟನೆ!
ಶಿವಮೊಗ್ಗ, ಫೆ. 21: ಶಿವಮೊಗ್ಗದ ನೂತನ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯ ಕಡೆಗಣನೆ ಮಾಡಲಾಗಿದೆ. ಕೇವಲ ಹಿಂದಿ, ಇಂಗ್ಲೀಷ್ ಭಾಷೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿ, ಮಂಗಳವಾರ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿತು.
ವಿಮಾನ ನಿಲ್ದಾಣದಲ್ಲಿ ಅಳವಡಿಸಲಾಗಿರುವ ವಿವಿಧ ಮಾಹಿತಿ ಫಲಕಗಳನ್ನು ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಹಾಕಲಾಗಿದೆ. ತ್ರಿಭಾಷಾ ಸೂತ್ರದ ಅನ್ವಯ ಕನ್ನಡ ಭಾಷೆಯಲ್ಲಿಯೂ ಮಾಹಿತಿ ಫಲಕಗಳನ್ನು ಹಾಕಬೇಕು.
ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆದ್ಯ ಗಮನಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಸಂಘಟನೆಯಿಂದ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕಿರಣ್, ಮುಖಂಡರುಗಳಾದ ನಜೀರ್, ಶಿವಕುಮಾರ್, ಲಕ್ಷ್ಮೀಶ್, ಸುರೇಶ್, ಮಕ್ಬುಲ್ ಅಹಮದ್, ಲಿಂಗರಾಜು, ಕಲಂದರ್, ಸಮೀರಾ, ಬಿಂಧು ಸೇರಿದಂತೆ ಮೊದಲಾದವರಿದ್ದರು.