
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನ..!
ಶಿವಮೊಗ್ಗ, ಫೆ.21: ಕೇಂದ್ರ ವಿಮಾನಯಾನ ನಿರ್ದೇಶನಾಲಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರ್ಪಡಿಸಿದ ಬೆನ್ನಲ್ಲೆಯೇ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಆರಂಭವಾಗಿದೆ.
ಮಂಗಳವಾರ ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ ಲ್ಯಾಂಡಿಂಗ್ ಆಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ವಿಮಾನ ಲ್ಯಾಂಡಿಂಗ್ ಆಗಲಿರುವ ಹಿನ್ನೆಲೆಯಲ್ಲಿ, ರಕ್ಷಣಾ ಪಡೆಗಳ ವಿಮಾನದ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತಿದೆ.
ಮೊದಲ ಬಾರಿಗೆ ವಿಮಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುತ್ತಿದ್ದಂತೆ, ಸ್ಥಳದಲ್ಲಿದ್ದವರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.