ಫೆ.23, 24 ರಂದು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಫೆ. 22: ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಮತ್ತು ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣದಿಂದ ಫೆ. 23 ಮತ್ತು 24 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Previous post ಯಶಸ್ವಿಯಾದ ವಿಮಾನದ ಲ್ಯಾಂಡಿಂಗ್ : ನಿಟ್ಟುಸಿರು ಬಿಟ್ಟ ಅಧಿಕಾರಿಗಳ ತಂಡ!
Next post ಗೋಪಾಲಕೃಷ್ಣ ಬೇಳೂರು ಜನುಮದಿನ : ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ