
ಶಿವಮೊಗ್ಗ : ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ!
ಶಿವಮೊಗ್ಗ (shivamogga), ಏ. 15: ಕಳೆದ ಶುಕ್ರವಾರ ಸ್ವತಂತ್ರ ಅಭ್ಯರ್ಥಿಯಾಗಿ (independent candidate) ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ (k s eshwarappa) ಅವರು, ಸೋಮವಾರ ಮತ್ತೊಮ್ಮೆ ನಾಮಪತ್ರ (nomination) ಸಲ್ಲಿಸಿದ್ದಾರೆ!
ಜಿಲ್ಲಾಧಿಕಾರಿ ಕಚೇರಿಗೆ (dc office) ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ತಮ್ಮ ನಾಲ್ವರು ಬೆಂಬಲಿಗರೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.
ಶುಕ್ರವಾರ ಬೆಳಿಗ್ಗೆ ತಮ್ಮ ಬೆಂಬಲಿಗರ ಮೂಲಕ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದರು. ನಂತರ ಅದೇ ದಿನ ತಾವೇ ಖುದ್ದಾಗಿ ಆಗಮಿಸಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಸೋಮವಾರ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದು ಕಾರಣವೇನೆಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.
ಸ್ಪರ್ಧೆ : ಶುಕ್ರವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಶಿವಮೊಗ್ಗ (shivamogga) ನಗರದ ತಮ್ಮ ನಿವಾಸದ ಆವರಣದಲ್ಲಿರುವ ಚುನಾವಣಾ ಕಚೇರಿಯಲ್ಲಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ (pressmeet) ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಪಕ್ಷ (bjp party) ಶುದ್ದೀಕರಣಕ್ಕಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಚುನಾವಣಾ (election) ಕಣಕ್ಕಿಳಿದಿದ್ದೆನೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ. ತಮ್ಮ ಗೆಲುವು ಕೂಡ ನಿಶ್ಚಿತ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...