
ಶಿವಮೊಗ್ಗ : ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ
ಶಿವಮೊಗ್ಗ (shivamogga), ಏ. 15: ಶಿವಮೊಗ್ಗ ಲೋಕಸಭಾ ಕ್ಷೇತ್ರದ (shimoga loksabha constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ (bangarappa) ಪುತ್ರಿ ಗೀತಾ ಶಿವರಾಜಕುಮಾರ್ (geetha shivarajakumar) ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ (dc office) ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ಗೀತಾ ಶಿವರಾಜಕುಮಾರ್ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜಕುಮಾರ್ (actor shivarajkumar), ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇತರರಿದ್ದರು.
ಮೆರವಣಿಗೆಯಲ್ಲಿ ಆಗಮಿಸಿ ಗೀತಾ ಶಿವರಾಜಕುಮಾರ್ ಅವರು ನಾಮಪತ್ರ ಸಲ್ಲಿಕೆ (nomination file) ಮಾಡಬೇಕಾಗಿತ್ತು. ಆದರೆ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿದ್ದ ಸಮಯ ಮೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕೂ ಮುನ್ನವೇ ಅವರು ನಾಮಪತ್ರ ಸಲ್ಲಿಸಿದರು.
ಮೆರವಣಿಗೆ : ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ರಾಮಣ್ಣಶ್ರೇಷ್ಠಿ ಪಾರ್ಕ್ ಸರ್ಕಲ್ ಆವರಣದಿಂದ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾತ್ತು. ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿವಿಧ ಕಲಾ ತಂಡಗಳು ಮರವಣಿಗೆಯಲ್ಲಿ ಭಾಗಿಯಾಗಿದ್ದವು.
ಗಾಂಧಿಬಜಾರ್ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ. ಕೋರ್ಟ್ ಸರ್ಕಲ್ ಆವರಣದಲ್ಲಿ ಮೆರವಣಿಗೆ ಅಂತ್ಯಗೊಳ್ಳಲಿದೆ. ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಭಾಗಿಯಾಗಿದ್ದರು.