
ಶಿವಮೊಗ್ಗ : ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ
ಶಿವಮೊಗ, ಏ.18: ಶಿವಮೊಗ್ಗ ಲೋಕಸಭಾ ಕ್ಷೇತ್ರದ (shimoga loksabha constituency) ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (b y Raghavendra) ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ (dc office) ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ (nomination) ಸಲ್ಲಿಸುವ ಸಂದಭದಲ್ಲಿ ಬಿ.ವೈ.ರಾಘವೇಂದ್ರ ಅವರೊಂದಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ (Sharada puryanaik), ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ (h hallapp), ಮುಖಂಡ ಎಂ.ಬಿ.ಭಾನುಪ್ರಕಾಶ್ ಹಾಗೂ ಬಿ.ವೈ.ರಾಘವೇಂದ್ರ ಪತ್ನಿ ತೇಜಸ್ವಿನಿ ಅವರು ಉಪಸ್ಥಿತರಿದ್ದರು.
ನಿಗದಿತ ಅವಧಿಯೊಳಗೆ ನಾಮಪತ್ರ ಸಲ್ಲಿಸಬೇಕಾಗಿದ್ದ ಕಾರಣದಿಂದ, ಬಿ.ವೈ.ರಾಘವೇಂದ್ರ ಅವರು ಮೆರವಣಿಗೆಯಿಂದ ಅರ್ಧಕ್ಕೆ ನಿಗರ್ಮಿಸಿದರು. ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮೆರವಣಿಗೆಯಲ್ಲಿ ಭಾಗಿಯಾದರು.
ಬೃಹತ್ ಮೆರವಣಿಗೆ : ನಾಮಪತ್ರ ಸಲ್ಲಿಕೆಗೂ ಮುನ್ನ ಬಿ.ವೈ.ರಾಘವೇಂದ್ರ ಅವರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಸಿದರು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದವು. ಬಿಜೆಪಿ (Bjp) ಜೊತೆಗೆ ಜೆಡಿಎಸ್ (jds)ಪಕ್ಷದ ಕಾರ್ಯಕರ್ತರು, ಮುಖಂಡರು ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.
ರಾಮಣ್ಣ ಶ್ರೇಷ್ಠಿ ಪಾರ್ಕ್ ಆವರಣದಿಂದ ಮೆರವಣಿಗೆ ಆರಂಭವಾಯಿತು. ಪ್ರಮುಖ ರಸ್ತೆಗಳಲ್ಲಿ ಸಾಗಿತು. ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ (yediyurappa), ಹೆಚ್.ಡಿ.ಕುಮಾರಸ್ವಾಮಿ (h d Kumaraswamy), ಬಸವರಾಜ ಬೊಮ್ಮಾಯಿ (Basavarajapp bommai), ಮಾಜಿ ಸಚಿವರುಗಳಾದ ಸಿ.ಟಿ.ರವಿ (c t Ravi), ಕುಮಾರ್ ಬಂಗಾರಪ್ಪ (kumara Bangarappa), ಆರಗ ಜ್ಞಾನೇಂದ್ರ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.
ಬಂಡಾಯದ ಬಿಸಿ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ (k s Eshwarappa) ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಕಾರಣದಿಂದ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಮೆರವಣಿಗೆಯು ಸಾಕಷ್ಟು ಗಮನ ಸೆಳೆದಿತ್ತು. ಯಾವೆಲ್ಲ ಮುಖಂಡರು ಭಾಗವಹಿಸಲಿದ್ದಾರೆ ಎಂಬ ಕುತೂಹಲ ಮೂಡಿಸಿತ್ತು.