
ಮುರುಘಾ ಶ್ರೀ ಮತ್ತೆ ಜೈಲಿಗೆ : ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ (delhi), ಏ. 23: ಮಠದ ವಸತಿ ನಿಲಯದಲ್ಲಿ ವಾಸವಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ, ಚಿತ್ರದುರ್ಗದ (Chitradurga) ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ (ಮುರುಘಾ ಶ್ರೀ) ಹೈಕೋರ್ಟ್ ನೀಡಿದ್ದ ಜಾಮೀನನ್ನು ಮಂಗಳವಾರ ಸುಪ್ರೀಂ ಕೋರ್ಟ್ (supreme court) ರದ್ದುಗೊಳಿಸಿದೆ.
ಪೋಕ್ಸೋ ಪ್ರಕರಣದಲ್ಲಿ (pocso case) ಬಂಧಿತರಾಗಿ ಜೈಲಿನಲ್ಲಿದ್ದ ಮುರುಘಾ ಶ್ರೀಗಳಿಗೆ (muruga sri), ಕಳೆದ ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರುಗೊಳಿಸಿತ್ತು.
ಇದರ ವಿರುದ್ದ ಮಾಜಿ ಸಚಿವ ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷ್ಯ ನಾಶಪಡಿಸಬಹುದು ಎಂದು ದೂರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿದೆ. ಪುನಃ ನ್ಯಾಯಾಂಗ ಬಂಧನಕ್ಕೆ (Judicial custody) ಕಳುಹಿಸುವಂತೆ ಆದೇಶ ಹೊರಡಿಸಿದೆ.
ಮುರುಘಾ ಶ್ರೀಗಳು ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ಹಾಗೂ ಪೋಷಕರ ವಿಚಾರಣೆ ಪೂರ್ಣಗೊಳ್ಳುವವರೆಗೂ ಅವರು ಬಂಧನದಲ್ಲಿರಬೇಕು. ಮುಂದಿನ 4 ತಿಂಗಳಲ್ಲಿ ತನಿಖಾ ಸಂಸ್ಥೆಗಳು ಅವರ ವಿಚಾರಣೆ ಪೂರ್ಣಗೊಳಿಸಬೇಕು. ಒಂದು ವೇಳೆ ವಿಚಾರಣೆ ಪೂರ್ಣಗೊಳ್ಳದಿದ್ದರೆ, ಇನ್ನೂ ಎರಡು ತಿಂಗಳುಗಳ ಕಾಲ ಸ್ವಾಮೀಜಿಯ ಬಂಧನದ ಅವಧಿ ವಿಸ್ತರಣೆ ಮಾಡಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ : ಮುರುಘಾ ಮಠದ ಡಾ.ಶಿವಮೂರ್ತಿ ಶರಣರ (Dr. Shivamurthy sharanaru of Muruga Mutt) ವಿರುದ್ದ 2022 ಆಗಸ್ಟ್ 31 ರಂದು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೂರು ದಾಖಲಾಗಿತ್ತು. ಸೆಪ್ಟೆಂಬರ್ 1 ರಂದು ಅವರ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಅವರು ಜೈಲಿನಲ್ಲಿದ್ದರು. 2023 ನವೆಂಬರ್ 16 ರಂದು ಅವರಿಗೆ ಷರತ್ತುಬದ್ದ ಜಾಮೀನು (bail) ಮಂಜೂರುಗೊಳಿಸಲಾಗಿತ್ತು.