ಮೂರನೇ ದಿನಕ್ಕೆ ರೈತರ ಪ್ರತಿಭಟನೆ : ಡಿಎಸ್ಎಸ್ ಮುಖಂಡರು ಭಾಗಿ

ಶಿವಮೊಗ್ಗ, ಫೆ. 23: ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ಸ್ವಾದೀನ ಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಂತೆ ಆಗ್ರಹಿಸಿ, ಶಿವಮೊಗ್ಗ ನಗರದ ಡಿಸಿ ಕಚೇರಿ ಎದುರು  ಭೂಮಿ ಕಳೆದುಕೊಂಡ ರೈತರು ನಡೆಸುತ್ತಿರುವ ಪ್ರತಿಭಟನೆ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. 

ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ಬೆಂಬಲಿಸಿ, ಧರಣಿಯಲ್ಲಿ ಭಾಗವಹಿಸಿದ್ದರು. ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ 24 ಎಕರೆ ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳಲಾಗಿತ್ತು. ಮೊದಲು ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು ಇದೀಗ ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಸ್ವಾದೀನ ಪಡಿಸಿಕೊಂಡ ಭೂಮಿಗೆ ನ್ಯಾಯಯುತ ಪರಿಹಾರ ವಿತರಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಡಿಎಸ್ಎಸ್ ಸಂಘಟನೆಯ ಮುಖಂಡರಾದ ಚಿನ್ನಯ್ಯ, ರಾಜಕುಮಾರ್, ರವಿ, ಲೋಕೇಶ್, ಮಹಾಲಿಂಗಪ್ಪ ಸೇರಿದಂತೆ ಮೊದಲಾದವರಿದ್ದರು.

Previous post ‘ಮೋದಿ ಮುಖ ಕಂಡರೇ ನಿದ್ರೆಯಲ್ಲಿಯೂ ಬೆಚ್ಚಿ ಬೀಳುವ ಕಾಂಗ್ರೆಸ್ಸಿಗರು!’ : ಹೆಚ್.ಡಿ.ಕುಮಾರಸ್ವಾಮಿ ಲೇವಡಿ
Next post ಲಾಡ್ಜ್ – ರೆಸಾರ್ಟ್ ಗಳಿಗೆ ಪೊಲೀಸರ ದಿಢೀರ್ ಭೇಟಿ : ಪರಿಶೀಲನೆ!